ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ರಾಷ್ಟ್ರೀಯ ನಾಯಕರಿಗೆ ಡಿ ಕೆ ಶಿವಕುಮಾರ್ ಟ್ವೀಟ್ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.
ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.
ಪಕ್ಷದ ಹಿರಿಯ ಮುಖಂಡರು ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ನನ್ನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕಾಗಿ ಕರ್ನಾಟಕದ ಜನರಿಗೆ ಸೇವೆ ಸಲ್ಲಿಸಲು ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ನ ಮತ್ತೆ ಅಧಿಕಾರಕ್ಕೆ ತರಲು ನಾನು ಕಾರ್ಯಕರ್ತನಾಗಿ ಎಲ್ಲ ನಾಯಕರೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಡಿಕೆಶಿ ಭರವಸೆ ನೀಡಿದ್ದಾರೆ.
ಕೈ ನಾಯಕರಿಂದ ಕೆಪಿಸಿಸಿ ನೂತನ ಸಾರಥಿಗೆ ಅಭಿನಂದನೆ:ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮುಂದುವರಿಯುತ್ತಿರುವ ಈಶ್ವರ್ ಖಂಡ್ರೆ, ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಹೆಚ್ ಕೆ ಪಾಟೀಲ್ ಸೇರಿ ಮತ್ತಿತರ ನಾಯಕರು ಶುಭಾಶಯ ತಿಳಿಸಿದ್ದಾರೆ.