ಕರ್ನಾಟಕ

karnataka

ETV Bharat / state

ಮೃತ ಬಾಲಕಲಾವಿದೆ ಸಮನ್ವಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ: ಕುಟುಂಬ ಸದಸ್ಯರಿಗೆ ಸಾಂತ್ವನ - ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ಮೃತಪಟ್ಟ ಸಮನ್ವಿ

ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ಮೃತಪಟ್ಟ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿಯ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಚಿಕ್ಕ ವಯಸ್ಸಿನಲ್ಲಿ ಇಂತಹ ಪ್ರತಿಭೆ ಎಲ್ಲರಿಗೂ ಸಿಗುವುದಿಲ್ಲ. ಆಕೆಗೆ ಇಷ್ಟು ಸಣ್ಣ ವಯಸ್ಸಿನಲ್ಲೇ ಈ ರೀತಿ ಆಗಬಾರದಿತ್ತು. ಯಮ ನಿಷ್ಕರುಣಿ ಎಂದು ಡಿಕೆಶಿ ಹೇಳಿದ್ದಾರೆ.

Samanvi, who died recently in a road accident
ಮೃತ ಬಾಲಕಲಾವಿದೆ ಸಮನ್ವಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ

By

Published : Jan 18, 2022, 7:25 PM IST

ಬೆಂಗಳೂರು:ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕಲಾವಿದೆ ಸಮನ್ವಿ ಅವರ ಗುಬ್ಬಲಾಳ ಸಮೀಪದ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಭೇಟಿ ನೀಡಿ, ಆಕೆಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮನ್ವಿ ಚಿಕ್ಕ ವಯಸ್ಸಿನಲ್ಲೇ ಸಾಂಸ್ಕೃತಿಕ ಕ್ಷೇತ್ರದಿಂದ ಜನರ ಮನಗೆದ್ದು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಳು. ಬಾಲ್ಯದಲ್ಲಿ ಇಂತಹ ಪ್ರತಿಭೆ ಎಲ್ಲರಿಗೂ ಒಲಿಯುವುದಿಲ್ಲ. ಆಕೆಗೆ ಎಳೆ ವಯಸ್ಸಿನಲ್ಲೇ ಈ ರೀತಿ ಆಗಬಾರದಿತ್ತು. ಯಮ ನಿಷ್ಕರುಣಿ ಎಂದು ಬೇಸರ ವ್ಯಕ್ತಪಡಿಸಿದರು.

ಮೃತ ಬಾಲಕಲಾವಿದೆ ಸಮನ್ವಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ

ಆಕೆಯ ತಂದೆ ನನಗೆ ತುಂಬಾ ಪರಿಚಯ. ನಾವೆಲ್ಲ ವಿದ್ಯಾರ್ಥಿಗಳಿದ್ದಾಗಿನಿಂದ ಪರಿಚಿತರು. ಈ ಸಮಯದಲ್ಲಿ ವೈಯಕ್ತಿಕವಾಗಿ ಹಾಗೂ ಪಕ್ಷದ ಅಧ್ಯಕ್ಷನಾಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಚಿಕ್ಕ ವಯಸ್ಸಿನಲ್ಲೇ ಅದ್ಭುತ ಪ್ರತಿಭೆಯೊಂದು ಮಾಯವಾಗಿದೆ. ಆಕೆಯ ತಂದೆ-ತಾಯಿ ಬಹಳ ನೋವಿನಲ್ಲಿದ್ದು, ಧೈರ್ಯ ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಇದು ಬಹಳ ದುಃಖಕರ ಸಮಯ. ಅವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ನ್ಯಾಷನಲ್​ ಕ್ರಷ್​ ರಶ್ಮಿಕಾ ಮಂದಣ್ಣ ಖಾತೆಗೆ ಮಗದೊಂದು ಸಿನಿಮಾ ಸೇರ್ಪಡೆ!

For All Latest Updates

TAGGED:

ABOUT THE AUTHOR

...view details