ಬೆಂಗಳೂರು:ರಾಜ್ಯ ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ತಲೆಮಾರಿಸಿಕೊಂಡಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ಕುರಿತು ಶುಕ್ರವಾರ ರಾತ್ರಿ ಟ್ವಿಟ್ ಮಾಡಿರುವ ನಿಗಮದ ಎಂಡಿ ಡಿ.ರೂಪಾ, ನಗರ ಪೊಲೀಸರನ್ನು ತರಾಟೆ ತೆಗೆದುಕೊಂಡಿದ್ದಾರೆ.
ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ನ್ಯಾಯಾಲಯ ಸುಮಾರು 10-12 ಬಾರಿ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದರೂ ಸಹ ಕೋರ್ಟ್ ಆದೇಶ ಪಾಲಿಸಿಲ್ಲ. ಆದರೆ, ನ್ಯಾಯಾಲಯಕ್ಕೆ ನಗರ ಪೊಲೀಸರು, ನಿಗಮದ ಅಧ್ಯಕ್ಷರು ಕಾಣೆಯಾಗಿದ್ದಾರೆ ಎಂದು ವರದಿ ಸಲ್ಲಿಸಿದ್ದಾರೆ ಎಂದು ರೂಪಾ ದೂರಿದ್ದಾರೆ.