ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯಲ್ಲಿ ಇದೇ ಮೊದಲು ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಇಂದು 20,272 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದಾಗ, ಇದರಲ್ಲಿ 71 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,44,785 ಕ್ಕೆ ಏರಿಕೆ ಆಗದ್ದರೆ, ಪಾಸಿಟಿವ್ ದರವೂ 0.35% ರಷ್ಟಿದೆ.
173 ಸೋಂಕಿತರು ಗುಣಮುಖರಾಗಿದ್ದು ಈವರೆಗೆ 39,02,813 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 1,891 ರಷ್ಟಿದೆ. ಸೋಂಕಿಗೆ ಇಬ್ಬರು ಮೃತಪಟ್ಟಿದ್ದು ಸಾವಿನ ಸಂಖ್ಯೆ 40,039 ಏರಿಕೆ ಕಂಡಿದೆ. ಡೆತ್ ರೇಟ್ 2.81% ರಷ್ಟಿದೆ.
ವಿಮಾನ ನಿಲ್ದಾಣದಿಂದ 3,011 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 53 ಸೋಂಕು ತಗುಲಿದ್ದು 17,81,060 ಕ್ಕೆ ಏರಿಕೆ ಆಗಿದೆ. 110 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 17,62,459 ಏರಿಕೆ ಕಂಡಿದೆ. ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,952 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,596 ರಷ್ಟಿದೆ.
ರೂಪಾಂತರಿ ವೈರಸ್ ಅಪ್ಡೇಟ್ಸ್..
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4620