ಕರ್ನಾಟಕ

karnataka

ETV Bharat / state

ನಾನು ಪಕ್ಷ ನೋಡಲ್ಲ, ವ್ಯಕ್ತಿ ನೋಡಿ ಪ್ರಚಾರ ಮಾಡ್ತೇನೆ: ನಟ ದರ್ಶನ್​​​​ - ಚಾಲೆಂಜಿಂಗ್​ ಸ್ಟಾರ್​ ದರ್ಶನ್​

ನಾನು ಪಕ್ಷ ನೋಡಿ ಮತ ಪ್ರಚಾರ ಮಾಡುವುದಿಲ್ಲ, ವ್ಯಕ್ತಿ ನೋಡಿ ಪ್ರಚಾರ ಮಾಡುತ್ತೇನೆ ಎಂದು ನಟ ದರ್ಶನ್​​ ಹೇಳಿದ್ದಾರೆ.

Darshan campaign for muniratna
ನಾನು ಪಕ್ಷ ನೋಡಲ್ಲ, ವ್ಯಕ್ತಿ ನೋಡಿ ಪ್ರಚಾರ ಮಾಡ್ತೇನೆ : ದರ್ಶನ್​​​​

By

Published : Oct 30, 2020, 12:24 PM IST

ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂಟ್ರಿ ಕೊಟ್ಟಿದ್ದಾರೆ.

ಮತ ಪ್ರಚಾರಕ್ಕೆ ಹೋಗುವುದಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಪಕ್ಷ ನೋಡಿ ಪ್ರಚಾರ ಮಾಡುವುದಿಲ್ಲ, ವ್ಯಕ್ತಿ ನೋಡಿ ಪ್ರಚಾರ ಮಾಡುತ್ತೇನೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಅವರು ಮಾಡಿದ ಕಾರ್ಯವನ್ನು ನೋಡಿದ್ದೇನೆ. ಲಾಕ್ ಡೌನ್ ಸಂದರ್ಭದಲ್ಲಿ ಅವರು ದಾಸೋಹ ಮಾಡಿದ್ರು. ಹೀಗಾಗಿ ಮಾನವೀಯ ದೃಷ್ಟಿಯಿಂದ ಮತ ಪ್ರಚಾರ ಮಾಡುತ್ತಿದ್ದೇನೆ ಎಂದರು.

ಮಾಧ್ಯಮದವರೊಂದಿಗೆ ಮಾತನಾಡಿದ ನಟ ದರ್ಶನ್​​​​

ಇದೇ ವೇಳೆ ಕೊರೊನಾ ಹಿನ್ನೆಲೆಯಲ್ಲಿ ಪ್ರಚಾರದ ಕುರಿತು ಮಾತನಾಡಿದ ಅವರು, ನಿಜ ಈಗ ಸಾಕಷ್ಟು ಮುಂಜಾಗ್ರತೆ ಕೈಗೊಳ್ಳಬೇಕು. ನಾವು ಕೂಡ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಚಾರ ಮಾಡುತ್ತೇವೆ. ಅಭಿಮಾನಿಗಳು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿರುವ ನಿಖಿಲ್ ಕುಮಾರಸ್ವಾಮಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ದರ್ಶನ್, ನಿಖಿಲ್ ಅವರು ತಮ್ಮ ಅಭ್ಯರ್ಥಿ ಪ್ರಚಾರ ನಡೆಸಲಿದ್ದಾರೆ. ನಾನು ಮುನಿರತ್ನ ಅವರ ಪರ ಪ್ರಚಾರ ನಡೆಸುತ್ತೇನೆ ಎಂದು ಹೇಳಿದರು.

ಇಂದು ಆರ್​ಆರ್​ ನಗರ ಕ್ಷೇತ್ರದಲ್ಲಿ ಇಡೀ ದಿನ ದರ್ಶನ್ ರೋಡ್ ಶೋ ನಡೆಸಲಿದ್ದಾರೆ.

ABOUT THE AUTHOR

...view details