ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟಲು ಪ್ರತಿಯೊಬ್ಬರೂ ಶ್ರಮಿಸುತ್ತಿರುವ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಅವರ ಬೆಂಬಲಿಗರು ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮ್ ಪ್ರಭು ಪಾಟೀಲ್ ಆರೋಪಿಸಿದ್ದಾರೆ.
ದತ್ತಾತ್ರೇಯ ರೇವೂರ್, ಬೆಂಬಲಿಗರಿಂದ ಅಧಿಕಾರಿಗಳಿಗೆ ಕಿರುಕುಳ : ಸೂಕ್ತ ಕ್ರಮಕ್ಕೆ ಆಗ್ರಹ - Patil Revour and his supporters harasses officers
ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಅವರ ಬೆಂಬಲಿಗರು ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮ್ ಪ್ರಭು ಪಾಟೀಲ್ ಆರೋಪಿಸಿದ್ದಾರೆ.
![ದತ್ತಾತ್ರೇಯ ರೇವೂರ್, ಬೆಂಬಲಿಗರಿಂದ ಅಧಿಕಾರಿಗಳಿಗೆ ಕಿರುಕುಳ : ಸೂಕ್ತ ಕ್ರಮಕ್ಕೆ ಆಗ್ರಹ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮ್ ಪ್ರಭು ಪಾಟೀಲ್](https://etvbharatimages.akamaized.net/etvbharat/prod-images/768-512-7400599-731-7400599-1590769126692.jpg)
ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ್ ಸಂಗಾ ಅವರ ಮೇಲೆ ಲಂಚದ ಆರೋಪ ಮಾಡಿರುವುದನ್ನು ಸರ್ಕಾರ ತಕ್ಷಣ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಹೇಳಿದರು. ಶಾಸಕರ ಬೆಂಬಲಿಗರು ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಅಧಿಕಾರಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ ಗುಂಡಾಗಿರಿ ಪ್ರವೃತ್ತಿ ತೋರಿಸಿರುವುದು ಮಾಧ್ಯಮಗಳಲ್ಲಿ ಬಿತ್ತರವಾಗಿದೆ.
ಕೂಡಲೇ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಬಡ ಜನತೆಗೆ ದಿನಸಿ ಕಿಟ್ ವಿತರಿಸುವ ವಿಚಾರದಲ್ಲೂ ಸಹ ಅಕ್ರಮಗಳು ನಡೆದಿವೆ. ಇದರ ಬಗ್ಗೆ ಎಸಿಬಿ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.