ಕರ್ನಾಟಕ

karnataka

ETV Bharat / state

ಹೊಸ‌ ಶಿಕ್ಷಣ ನೀತಿ ಅನುಷ್ಠಾನ ಕುರಿತು ತಿಂಗಳಾಂತ್ಯಕ್ಕೆ ಅಂತಿಮ ವರದಿ: ಅಶ್ವತ್ಥ ನಾರಾಯಣ - Education Policy Amendment

ಹೊಸ ಶಿಕ್ಷಣ ನೀತಿ ಸಂಬಂಧ ಟಾಸ್ಕ್ ಫೋರ್ಸ್‌ ಸಮಿತಿ ಇದೇ ತಿಂಗಳು 20ಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಅಂತಿಮ ನೀಲನಕ್ಷೆಯನ್ನು ಆ. 29ಕ್ಕೆ ಸಲ್ಲಿಕೆ ಮಾಡಲು ಸೂಚಿಸಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

dcm-ashwath-narayan-on-new-education-policy
ಹೊಸ‌ ಶಿಕ್ಷಣ ನೀತಿ ಅನುಷ್ಠಾನ ಕುರಿತು ತಿಂಗಳಾಂತ್ಯಕ್ಕೆ ಅಂತಿಮ ವರದಿ: ಅಶ್ವತ್ಥ್ ನಾರಾಯಣ್

By

Published : Aug 17, 2020, 3:36 PM IST

ಬೆಂಗಳೂರು: ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ತಿಂಗಳಾಂತ್ಯದೊಳಗೆ ಅಂತಿಮ ವರದಿ ಸಲ್ಲಿಸುವಂತೆ ಕಾರ್ಯಪಡೆಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದರು.

ವಿಧಾನಸೌಧದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸಂಬಂಧ ಶಿಕ್ಷಣ ತಜ್ಞರ ಜೊತೆ ಚರ್ಚೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ‌ ಅನುಷ್ಠಾನ ಮಾಡುವಲ್ಲಿ ಏನೆಲ್ಲಾ ಸವಾಲುಗಳಿವೆ ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇವೆ. ಮಾರ್ಚ್​ನಲ್ಲೇ ನೀತಿ ಜಾರಿ ಬಗ್ಗೆ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೆವು ಎಂದರು.

ಡಿಸಿಎಂ ಅಶ್ವತ್ಥ್ ನಾರಾಯಣ್ ಸುದ್ದಿಗೋಷ್ಠಿ

ರಾಜ್ಯದಲ್ಲಿ ಹೊಸ ಶಿಕ್ಷಣ‌ ನೀತಿ ಜಾರಿ ಬಗ್ಗೆ ಚರ್ಚೆ ನಡೆಸಿದ್ದೇವೆ. ಯಾವುದನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಯಾವುದನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ ಎಂದರು.

ಹೊಸ ಶಿಕ್ಷಣ ನೀತಿ ಸಂಬಂಧ ಟಾಸ್ಕ್ ಫೋರ್ಸ್‌ ಸಮಿತಿ ಇದೇ ತಿಂಗಳು 20ಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಅಂತಿಮ ನೀಲನಕ್ಷೆಯನ್ನು ಆ. 29ಕ್ಕೆ ಸಲ್ಲಿಕೆ ಮಾಡಲು ಸೂಚಿಸಲಾಗಿದೆ. ಒಂದು ವರ್ಷದವರೆಗೆ ಹಂತ ಹಂತವಾಗಿ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಹೊಸ ನೀತಿಯ ಅನುಷ್ಠಾನಕ್ಕೆ‌ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡಲಿದೆ ಎಂದರು.

ಹೊಸ ಶಿಕ್ಷಣ ನೀತಿಯನ್ನು 2030ರೊಳಗೆ ಸಾಧಿಸುವ ಗುರಿ ಹೊಂದಿದ್ದೇವೆ. ಇದಕ್ಕೆ ಬೇಕಾದ ರಾಜಕೀಯ ಇಚ್ಛಾಶಕ್ತಿ ಇದೆ. ಅದನ್ನು ಕಾರ್ಯರೂಪಕ್ಕೆ ತರಲು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಮಾತೃ ಭಾಷೆ ಶಿಕ್ಷಣ ಸಂಬಂಧ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಕೂಡ ಕಾನೂನು ತಿದ್ದುಪಡಿ ತರುತ್ತೇವೆ. ಮೊದಲಿಗೆ ನೀತಿಯನ್ನು ಒಪ್ಪಿಕೊಂಡಿದ್ದೇವೆ. ವರದಿಯ ಅನ್ವಯ ಎಲ್ಲಾ ತಿದ್ದುಪಡಿಗಳು ಆಗಬೇಕು. ಆದಾದ ಮೇಲೆ ಎಲ್ಲಾ ಗೊಂದಲಗಳಿಗೂ ತೆರೆ ಬೀಳಲಿದೆ. ಮಾತೃ ಭಾಷೆಗೆ ರಾಜ್ಯ ಸರ್ಕಾರ ಹೇಗೆ ಒತ್ತು ನೀಡಬೇಕೋ ಅದನ್ನು ನೀಡುತ್ತೇವೆ ಎಂದು ತಿಳಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ಸ್ವಾಯತ್ತ ವಿಶ್ವವಿದ್ಯಾನಿಲಯ, 6 ಸಂಶೋಧನಾ ಸಂಸ್ಥೆ, 3 ವರ್ಷಗಳಲ್ಲಿ 10 ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.

ABOUT THE AUTHOR

...view details