ಕರ್ನಾಟಕ

karnataka

ETV Bharat / state

ಔಷಧ ಕಂಪನಿಗಳ ವಿರುದ್ಧ ಗುಡುಗಿದ ಡಿಸಿಎಂ: ರೆಮ್​ಡೆಸಿವಿರ್​ ಕಂಪನಿಗಳಿಗೆ ನೋಟಿಸ್​ - Ashwath narayan outrage against medical company

ಯಾರಿಗೂ ನಾವು ಕೈಗೆ ಈ ಔಷಧ ಕೊಡುವುದಿಲ್ಲ. ಯಾರಿಗೆ ಕೊಡುತ್ತೇವೆಯೋ ಆ ಸೋಂಕಿತರ ಮೊಬೈಲ್‌ಗೂ ಸಂದೇಶ ಹೋಗುತ್ತದೆ. ಎಲ್ಲವೂ ಪಾರದರ್ಶಕವಾಗಿರುತ್ತದೆ ಎಂದು ಉಪ ಮುಖ್ಯಮಂತ್ರಿ  ಡಾ. ಸಿ.ಎನ್.ಅಶ್ವತ್ಥ ನಾರಾಯಣ​ ತಿಳಿಸಿದ್ದಾರೆ.

dcm-ashwath-narayan
ಡಾ. ಸಿ ಎನ್ ಅಶ್ವತ್ಥನಾರಾಯಣ್​

By

Published : May 9, 2021, 9:33 PM IST

ಬೆಂಗಳೂರು: ರಾಜ್ಯಕ್ಕೆ ನಿಗದಿಪಡಿಸಿದ ರೆಮ್​ಡೆಸಿವಿರ್​ ಕೋಟಾವನ್ನು ಸಕಾಲಕ್ಕೆ ಸರಿಯಾಗಿ ಪೂರೈಕೆ ಮಾಡದಿರುವ ಔಷಧ ಕಂಪನಿಗಳಿಗೆ ನೊಟೀಸ್‌ ನೀಡಲಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ​ ತಿಳಿಸಿದರು.

ಮಲ್ಲೇಶ್ವರದಲ್ಲಿ ಇಂದು ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಡಿಸಿಎಂ, ನಮ್ಮ ನಿಗದಿತ ಕೋಟಾ ಕೊಡಲು ಕಂಪನಿಗಳಿಗೆ ಏನು ಸಮಸ್ಯೆ? ಕೊಡಬೇಕು ಎಂದರೆ ಕೊಡಬೇಕಷ್ಟೇ. ಅನಕ್ಷರಸ್ಥರಿಗೂ ಕಾನೂನಿನ ಅರಿವು ಇರುತ್ತದೆ. ದೊಡ್ಡ ದೊಡ್ಡ ಔಷಧ ಕಂಪನಿಗಳಿಗೆ ಇರುವುದಿಲ್ಲವೆ? ಒಂದು ದಿನ ಸಪ್ಲೈ ಮಾಡಿ ಇನ್ನೊಂದು ದಿನ ಮಾಡದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು.

ಮಹಾರಾಷ್ಟ್ರದ ನಂತರ ಇಡೀ ದೇಶದಲ್ಲಿಯೇ ಅತಿ ಹೆಚ್ಚು ರೆಮ್​​ಡೆಸಿವಿರ್​ ಹಂಚಿಕೆ ಆಗಿರುವುದು ಕರ್ನಾಟಕಕ್ಕೆ ಮಾತ್ರ. ಆದರೆ, ಪೂರೈಕೆ ನಿರಂತರತೆ ಇಲ್ಲದಿರುವುದೇ ಸಮಸ್ಯೆಯಾಗಿದೆ. ಇದನ್ನು ಸರಿ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಸರಿಯಾಗಿ ಪೂರೈಕೆ ಮಾಡದಿದ್ದರೆ ಆ ಕಂಪನಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೇರವಾಗಿ ಸರ್ಕಾರವೇ ರೆಮ್​ಡೆಸಿವಿರ್​ ನೀಡುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಪೋರ್ಟಲ್‌ ಮೂಲಕ ಪಡೆಯಬೇಕು. ಯಾರಿಗೂ ನಾವು ಕೈಗೆ ಈ ಔಷಧ ಕೊಡುವುದಿಲ್ಲ. ಯಾರಿಗೆ ಕೊಡುತ್ತೇವೆಯೋ ಆ ಸೋಂಕಿತರ ಮೊಬೈಲ್‌ಗೂ ಸಂದೇಶ ಹೋಗುತ್ತದೆ. ಎಲ್ಲವೂ ಪಾರದರ್ಶಕವಾಗಿರುತ್ತದೆ ಎಂದು ತಿಳಿಸಿದರು.

ಓದಿ:ರಾಜ್ಯದಲ್ಲಿಂದು ಕೋವಿಡ್​ಗೆ 490 ಮಂದಿ ಬಲಿ.. 47 ಸಾವಿರಕ್ಕೂ ಅಧಿಕ ಕೇಸ್​ ದಾಖಲು!

ABOUT THE AUTHOR

...view details