ಕರ್ನಾಟಕ

karnataka

ETV Bharat / state

'ಅಶ್ವತ್ಥನಾರಾಯಣ್ ಸಾಚಾನಾ?' ಎಂಬ ಹೆಚ್​ಡಿಕೆ ಹೇಳಿಕೆಗೆ ಟ್ವೀಟ್​ ಮೂಲಕ ಉತ್ತರ ಕೊಟ್ಟ ಡಿಸಿಎಂ - ಅಶ್ವತ್ಥನಾರಾಯಣ್

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿಯವರು ಮಾಡಿರುವ ಆರೊಪಕ್ಕೆ ಡಿಸಿಎಂ ಡಾ.ಅಶ್ವತ್ಥನಾರಾಯಣ್ ಪ್ರಕ್ರಿಯಿಸಿದ್ದು, ಅಧಿಕಾರದಲ್ಲಿರದ ಹತಾಶೆಯನ್ನು ಅಸಂಬದ್ಧ ಹೇಳಿಕೆಯ ಮೂಲಕ ಹೊರ ಹಾಕುವುದು ನಿಮ್ಮ ಹಳೆಯ ಚಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಿಸಿಎಂ ಡಾ.ಅಶ್ವತ್ಥನಾರಾಯಣ್

By

Published : Sep 6, 2019, 2:10 PM IST

ಬೆಂಗಳೂರು: ಅಧಿಕಾರದಲ್ಲಿರದ ಹತಾಶೆಯನ್ನು ಅಸಂಬದ್ಧ ಹೇಳಿಕೆಯ ಮೂಲಕ ಹೊರ ಹಾಕುವುದು ನಿಮ್ಮ ಹಳೆಯ ಚಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿಕೆ ವಿರುದ್ಧ ಡಿಸಿಎಂ‌ ಡಾ.ಅಶ್ವತ್ಥನಾರಾಯಣ್ ವಾಗ್ದಾಳಿ ನಡೆಸಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್ ಏನ್ ಸಾಚಾನಾ? ಮಲ್ಲೇಶ್ವರಂ ಕ್ಷೇತ್ರದಲ್ಲಿನ ಕಾಮಗಾರಿಗಳಲ್ಲಿ ನಡೆದಿರುವ ಹಗರಣಗಳು, ಬಿಬಿಎಂಪಿ ಕಚೇರಿಯಲ್ಲಿ ಕಡತಗಳಿಗೆ‌ ಬೆಂಕಿ ಬಿದ್ದ ಪ್ರಕರಣ, ಇದೆಲ್ಲಾ ಏನು ಎನ್ನುವುದು ಗೊತ್ತಿದೆ ಎಂದೆಲ್ಲ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಇದಕ್ಕೆ ಪ್ರಕ್ರಿಯಿಸಿರುವ ಡಿಸಿಎಂ ಅಶ್ವತ್ಥನಾರಾಯಣ್ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಅವರ ಅಜ್ಞಾನವನ್ನು ಪ್ರದರ್ಶಿಸಿದೆ. ಯಾವುದೇ ಆರೋಪ ಮಾಡುವಾಗ ಒಬ್ಬ ಮಾಜಿ ಸಿಎಂ ವಾಸ್ತವ ತಿಳಿದುಕೊಳ್ಳದೆ ಹತಾಶರಾಗಿ, ಏನೇನೊ ಹೇಳಿ ಅಪಹಾಸ್ಯಕ್ಕೆ ಒಳಗಾಗಿದ್ದಾರೆ ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ABOUT THE AUTHOR

...view details