ಕರ್ನಾಟಕ

karnataka

ETV Bharat / state

ವಿಜ್ಞಾನ ವಿದ್ಯಾರ್ಥಿಗಳಿಗೆ ಸ್ವ್ಯಾಬ್​ ಸಂಗ್ರಹಣೆ ತರಬೇತಿ ನೀಡಿ : ಡಿಸಿಎಂ ಅಶ್ವತ್ಥ್ ನಾರಾಯಣ

ರಾಮನಗರ ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟವರಿಗೆ 24 ಗಂಟೆಯೊಳಗೆ ಪರೀಕ್ಷೆಯ ವರದಿ ನೀಡಬೇಕು. ವರದಿ ಬ್ಯಾಕ್‌ಲಾಗ್ ಆಗದಂತೆ ನೋಡಿಕೊಳ್ಳಿ. ಕೋವಿಡ್-19 ಪರೀಕ್ಷೆ ರೋಗಿಗಳನ್ನು ಒಳಪಡಿಸುವಾಗ ಸರಿಯಾದ ವಿಳಾಸ ಪಡೆದುಕೊಳ್ಳಿ..

ವಿಜ್ಞಾನ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥನಾರಾಯಣ
ವಿಜ್ಞಾನ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥನಾರಾಯಣ

By

Published : Aug 3, 2020, 8:51 PM IST

Updated : Aug 3, 2020, 9:13 PM IST

ಬೆಂಗಳೂರು :ಕೋವಿಡ್ 19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದೆ. ಸ್ವ್ಯಾಬ್ ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ್‌ ನಾರಾಯಣ ಅವರು ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ಡಿಸಿಎಂ ಅಶ್ವತ್ಥ್ ನಾರಾಯಣ

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಮನಗರ ಜಿಲ್ಲಾಡಳಿತದ ಜತೆ ಚರ್ಚೆ ನಡೆಸಿದ ಅವರು, ರಾಮನಗರ ಜಿಲ್ಲೆಯಲ್ಲಿರುವ 69 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ಪರೀಕ್ಷೆಯ ಸ್ವ್ಯಾಬ್ ಸಂಗ್ರಹಣೆ ಕೇಂದ್ರಗಳನ್ನು ತೆರೆದು ತರಬೇತಿ ನೀಡಲಾಗುವ ವಿದ್ಯಾರ್ಥಿಗಳನ್ನು ನಿಯೋಜಿಸಿಕೊಳ್ಳಿ. ಜಿಲ್ಲೆಯಲ್ಲಿ ಕೋವಿಡ್-19 ಲಕ್ಷಣವುಳ್ಳ ರೋಗಿ ಪರೀಕ್ಷೆಗೆ ಒಳಪಡಬೇಕು ಎಂದರೆ ಯಾವುದೇ ಕಾರಣಕ್ಕೂ ಅವರು ಅದರಿಂದ ವಂಚಿತರಾಗಬಾರದು ಎಂದರು.

24 ಗಂಟೆಯೊಳಗೆ ವರದಿ :ರಾಮನಗರ ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟವರಿಗೆ 24 ಗಂಟೆಯೊಳಗೆ ಪರೀಕ್ಷೆಯ ವರದಿ ನೀಡಬೇಕು. ವರದಿ ಬ್ಯಾಕ್‌ಲಾಗ್ ಆಗದಂತೆ ನೋಡಿಕೊಳ್ಳಿ. ಕೋವಿಡ್-19 ಪರೀಕ್ಷೆ ರೋಗಿಗಳನ್ನು ಒಳಪಡಿಸುವಾಗ ಸರಿಯಾದ ವಿಳಾಸ ಪಡೆದುಕೊಳ್ಳಿ. ಇಲ್ಲವಾದಲ್ಲಿ ಪಾಸಿಟಿವ್ ಬಂದ ಸಂದರ್ಭದಲ್ಲಿ ಪತ್ತೆ ಹಚ್ಚುವುದು ಕಷ್ಟಕರವಾಗುತ್ತದೆ ಹಾಗೂ ರೋಗ ಕೂಡ ಹರಡುತ್ತದೆ. ಐಎಲ್‌ಐ ಮತ್ತು ಎಸ್‌ಎಆರ್‌ಐ ಪ್ರಕರಣಗಳಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿ ಎಂದು ಸೂಚಿಸಿದರು.

ಹೆಚ್ಚುವರಿ ಕಟ್ಟಡಕ್ಕೆ ಪ್ರಸ್ತಾವನೆ :ನಿರ್ಮಾಣವಾಗುತ್ತಿರುವ ಜಿಲ್ಲಾಸ್ಪತ್ರೆಗೆ ಹೆಚ್ಚುವರಿ ಕಟ್ಟಡ ಮತ್ತು ಉಪಕರಣಗಳ ಅವಶ್ಯಕತೆಯಿದ್ದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸಿ. ಮಂಡ್ಯ ಜಿಲ್ಲೆಯ ನಂತರ ಬೆಂಗಳೂರಿಗೆ ತಲುಪುವವರೆಗೂ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಯಾವುದೇ ಟ್ರಾಮಾ ಸೆಂಟರ್ ಇಲ್ಲ. ಜಿಲ್ಲಾಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸೇರಿ ಆಸ್ಪತ್ರೆಗೆ ಬೇಕಿರುವ ಸಿಬ್ಬಂದಿ, ಸಲಕರಣೆಗಳ ವಿವರವಾದ ಮಾಹಿತಿ ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕೆರೆ ಒತ್ತುವರಿ ತೆರವುಗೊಳಿಸಿ :ರಾಮನಗರ ಜಿಲ್ಲೆಯಲ್ಲಿರುವ ಕೆರೆಗಳ ಸರ್ವೆ ನಡೆಸಿ ಒತ್ತುವರಿ ಶೀಘ್ರವಾಗಿ ತೆರವುಗೊಳಿಸಬೇಕು. ಗ್ರಾಮಗಳಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಿಗರು ತಮ್ಮ ವ್ಯಾಪ್ತಿಗೆ ಬರುವ ಕೆರೆಗಳ ಬಗ್ಗೆ ನಿಗಾವಹಿಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು. ಒತ್ತುವರಿ ಪ್ರಕರಣಗಳಿದ್ದಲ್ಲಿ ನೋಟಿಸ್ ನೀಡಿ ತೆರವುಗೊಳಿಸಿ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

ಸಿಎಸ್ಆರ್ ಅನುದಾನ :ರಾಮನಗರ ಜಿಲ್ಲೆಯಲ್ಲಿ ಬಹಳಷ್ಟು ಕೈಗಾರಿಕೆಗಳು ತಮ್ಮ ಸಿಎಸ್‌ಆರ್‌ ಅನುದಾನವನ್ನು ಬೇರೆ ಜಿಲ್ಲೆಗಳಿಗೆ ನೀಡಿ ಅಭಿವೃದ್ಧಿ ಕೆಲಸ ನಡೆಸುತ್ತಿವೆ. ಜಿಲ್ಲೆಯಲ್ಲಿ ಸರಿಯಾದ ರೀತಿ ಯೋಜನೆ ರೂಪಿಸಿ ಕೈಗಾರಿಕೆಗಳ ಸಿಎಸ್‌ಆರ್‌ ಅನುದಾನ ಪಡೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಿಕೊಳ್ಳಿ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಅವರು ಮಾತನಾಡಿ, ಜಿಲ್ಲೆಯಲ್ಲಿ 1,273 ಕೋವಿಡ್ ಪಾಸಿಟಿವ್ ಪ್ರಕರಣಗಳಿವೆ. 566 ಮಂದಿ ಗುಣಮುಖರಾಗಿರುತ್ತಾರೆ. 690 ಸಕ್ರಿಯ ಪ್ರಕರಣಗಳಿದ್ದು, 17 ಜನ ಮೃಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಂ ಎಸ್‌ ಅರ್ಚನಾ, ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠ ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ ಪಿ ವಿಜಯ್ ಸೇರಿ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Last Updated : Aug 3, 2020, 9:13 PM IST

ABOUT THE AUTHOR

...view details