ಕರ್ನಾಟಕ

karnataka

ETV Bharat / state

ಹಳೆ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚನೆ, ಸಂಬಂಧಪಟ್ಟವರ ಜೊತೆ ಸಮಾಲೋಚನೆ: ಡಿಸಿಎಂ ಡಿ.ಕೆ.ಶಿವಕುಮಾರ್ - ರಾಷ್ಟ್ರೀಯ ಪಿಂಚಣಿ ಯೋಜನೆ

ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಂಬಂಧಪಟ್ಟ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗು ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ‌ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

DK Sivakumar
ಡಿ.ಕೆ.ಶಿವಕುಮಾರ್

By

Published : Jul 7, 2023, 6:49 AM IST

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಮಿತಿ ರಚಿಸಿ ಸಂಬಂಧಿಸಿದ ಸಂಸ್ಥೆಗಳ ಜೊತೆಗೆ ಸಮಾಲೋಚನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಡಾ.ಕೆ.ವೈ ನಾರಾಯಣಸ್ವಾಮಿ ಅವರು ನಿಯಮ 72ರಡಿ 2006 ರ ಏಪ್ರಿಲ್ 1ರ ನಂತರ ಸೇವೆಗೆ ಸೇರಿರುವ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವುದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿಯ ನಂತರ ಯಾವುದೇ ರೀತಿಯ ಆರ್ಥಿಕ ಸೌಲಭ್ಯ ದೊರೆಯದೆ ನಿವೃತ್ತಿ ಜೀವನ ನಡೆಸುವುದು ಕಷ್ಟವಾಗಿದೆ. ಇತ್ತೀಚೆಗೆ ರಾಜಸ್ಥಾನ ಸರ್ಕಾರವು ತನ್ನ 2022 -23ನೇ ಸಾಲಿನ ಆಯವ್ಯಯ ಮುಂಗಡ ಪತ್ರದಲ್ಲಿ ಅಲ್ಲಿನ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮುಂದುವರೆಸುವ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಅದೇ ಮಾದರಿಯಲ್ಲಿ 2006ರ ಏ.1ರ ನಂತರ ನೇಮಕಗೊಂಡ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಮುಂದುವರೆಸುವ ವಿಚಾರವಾಗಿ ಮಾತನಾಡಿ ಸದನದ ಗಮನ ಸೆಳೆದರು.

ಇದಕ್ಕೆ ಸಭಾನಾಯಕ ಬೋಸರಾಜು ಉತ್ತರಿಸಿ, ಹಳೆ ಪಿಂಚಣಿ ಯೋಜನೆಯ ಆರ್ಥಿಕ ಹೊರೆ ನಿಭಾಯಿಸಲು ಸಾಕಷ್ಟ ನಿಧಿಯ ಆಧಾರ ಇಲ್ಲ. ರಿಸರ್ವ್ ಬ್ಯಾಂಕ್​ ರಚಿಸಿದ ಸಮಿತಿಯ ವರದಿ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು 2004 ರ ಜ.1 ರಿಂದ ಜಾರಿಗೊಳಿಸಿದೆ. ಅದರಂತೆ ಇತರೆ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಕೂಡ ಸರ್ಕಾರದ ಆದೇಶ 2005ರ ಮಾರ್ಚ್ 1ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಇರುವ ಸೌಲಭ್ಯಗಳ ವಿವರ ಕೆಳಕಂಡಂತಿದೆ ಎಂದು ಉತ್ತರದಲ್ಲಿ ವಿವರಿಸಿದರು.

ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ನೌಕರರು ನಿವೃತ್ತರಾದರೆ/ಸೇವೆಯಲ್ಲಿರುವ ಸಂದರ್ಭದಲ್ಲಿ ಅವರುಗಳ PRAN (ಶಾಶ್ವತ ನಿವೃತ್ತಿ ಖಾತೆ ಸಂಖ್ಯೆ) ಖಾತೆಯಲ್ಲಿನ ಮೊತ್ತವನ್ನು ಈ ಕೆಳಕಂಡಂತೆ ಇತ್ಯರ್ಥಪಡಿಸಲಾಗುವುದು.

1) ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ನಿವೃತ್ತಿ ಹೊಂದಿದ ನೌಕರರ ಪ್ರನ್ (PRAN) ಖಾತೆಯಲ್ಲಿ 5 ಲಕ್ಷ ರೂಪಾಯಿಗಿಂತ ಕಡಿಮೆ ಮೊತ್ತವಿದ್ದರೆ ನೌಕರ ಖಾತೆಯಲ್ಲಿರುವ ಸಂಪೂರ್ಣ ಮೊತ್ತವನ್ನು ಇತ್ಯರ್ಥಪಡಿಸಲಾಗುವುದು ಹಾಗೂ ಪ್ರಾನ್ ಖಾತೆಯಲ್ಲಿನ ಮೊತ್ತವು 5 ಲಕ್ಷಕ್ಕಿಂತ ಮೇಲ್ಪಟ್ಟಿದ್ದರೆ ಪ್ರಾನ್ ಖಾತೆಯಲ್ಲಿರುವ 60% ಮೊತ್ತವನ್ನು ನೌಕರರು ಹಿಂಪಡೆಯಬಹುದಾಗಿದ್ದು, ಉಳಿದ 40% ಮೊತ್ತವನ್ನು ಕಡ್ಡಾಯವಾಗಿ Annuity Service Providerಯಲ್ಲಿ ಹೂಡಿಕೆ ಮಾಡಿ ಮಾಸಿಕ ಪಿಂಚಣಿ ಪಡೆಯಬೇಕು.

2) ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಸೇವೆಗೆ ರಾಜೀನಾಮೆ ನೀಡಿದ ನೌಕರರ ಪ್ರಾನ್ ಖಾತೆಯಲ್ಲಿ 2.50 ಲಕ್ಷಕ್ಕಿಂತ ಕಡಿಮೆ ಮೊತ್ತವಿದ್ದರೆ ನೌಕರರ ಖಾತೆಯಲ್ಲಿನ ಸಂಪೂರ್ಣ ಮೊತ್ತವನ್ನು ಇತ್ಯರ್ಥಪಡಿಸಲಾಗುವುದು. ನೌಕರರ ಪ್ರಾನ್ ಖಾತೆಯಲ್ಲಿನ ಮೊತ್ತವು 2.50 ಲಕ್ಷಕ್ಕಿಂತ ಮೇಲ್ಪಟ್ಟ ದರ ಶೇ.20 ರಷ್ಟು ಮೊತ್ತವನ್ನು, ನೌಕರರು ಹಿಂಪಡೆಯಬಹುದಾಗಿದ್ದು, ಉಳಿದ 80% ಮೊತ್ತವನ್ನು ಕಡ್ಡಾಯವಾಗಿ Annuity Service Provider ಅಲ್ಲಿ ಪಡೆಯಬೇಕಿದೆ.

3) ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟ ಸಂದರ್ಭದಲ್ಲಿ ಪ್ರಾನ್ ಖಾತೆಯಲ್ಲಿ 5 ಲಕ್ಷಕ್ಕಿಂತ ಕಡಿಮೆ ಮೊತ್ತವಿದ್ದರೆ, ಮೃತರ ನಾಮನಿರ್ದೇಶಿತರಿಗೆ ಸಂಪೂರ್ಣ ಮೊತ್ತವನ್ನು ಇತ್ಯರ್ಥಪಡಿಸಲಾಗುವುದು. ಫ್ರಾನ್ ಖಾತೆಯಲ್ಲಿನ ಮೊತ್ತವು 5 ಲಕ್ಷಕ್ಕಿಂತ ಮೇಲ್ಪಟ್ಟಿದ್ದರೆ ಪ್ರಾನ್ ಖಾತೆಯಲಿರುವ ಶೇ. 20ರಷ್ಟು ಮೊತ್ತವನ್ನು ಮೃತರ ನಾಮನಿರ್ದೇಶಿತರಿಗೆ ಇತ್ಯರ್ಥಪಡಿಸಲಾಗುವುದು ಹಾಗೂ 80% ರಷ್ಟು ಮೊತ್ತವು ಕಡ್ಡಾಯವಾಗಿ Annuity Service Provider ನಲ್ಲಿ ಹೂಡಿಕೆ ಮಾಡಿ ಮಾಸಿಕ ಪಿಂಚಣಿ ಪಡೆಯಬೇಕು.

4) ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ನೌಕರರು ಸೇವೆಯಲ್ಲಿರುವಾಗಲೇ ಮೃತರಾದರೆ ಸರ್ಕಾರದಿಂದ ನೌಕರರ ಕುಟುಂಬಕ್ಕೆ ಈ ಸೌಲಭ್ಯ ನೀಡಲಾಗುತ್ತದೆ. ಅದೇನೆಂದರೆ, ಎನ್‌.ಪಿ.ಎಸ್‌, ನೌಕರರು 2006ರ‌ ಮಾ.1ರಂದು ಮತ್ತು ತದನಂತರ ಸೇವೆಯಲ್ಲಿರುವಾಗಲೇ ಮೃತರಾದ ಸರ್ಕಾರಿ ನೌಕರರ ಕುಟುಂಬಕ್ಕೆ ಮರಣ ಉಪದಾನವನ್ನು ಸರ್ಕಾರದ ಆದೇಶದನ್ವಯ ಕುಟುಂಬ ಪಿಂಚಣಿ ಮತ್ತು ಮರಣ ಉಪದಾನ ಸೌಲಭ್ಯ ಪಡೆಯಬಹುದು.

ಇದನ್ನೂ ಓದಿ :ರೈತರ ಪಂಪ್​ಸೆಟ್​ಗಳಿಗೆ ಸೌರ ವಿದ್ಯುತ್‍ ಸಂಪರ್ಕ ಕಲ್ಪಿಸುವ ಸಂಬಂಧ ಶೀಘ್ರದಲ್ಲೇ ನೀತಿ: ಸಚಿವ ಕೆ ಜೆ ಜಾರ್ಜ್

ಸರ್ಕಾರದ ಆದೇಶದಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂದು ಸಚಿವರು ವಿವರ ನೀಡಿದರು.

ತದನಂತರ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಸಂಕನೂರ, ಭೋಜೇಗೌಡ ಮುಂತಾದವರು ಈ ಕುರಿತು ಮಾತನಾಡಿದರು. ಬಳಿಕ ಉತ್ತರಿಸಿದ ಉಪಮುಖ್ಯಮಂತ್ತಿ ಡಿ.ಕೆ. ಶಿವಕುಮಾರ್, ಸರ್ಕಾರಿ ನೌಕರರು ನಮ್ಮ ರಾಷ್ಟ್ರದ ನಿರ್ಮಾತೃಗಳು. ಅವರ ಏಳಿಗೆಗೆ ಸರ್ಕಾರ ಬದ್ಧ. ರಾಜಸ್ಥಾನ ಹಾಗೂ ಮಧ್ಯಪ್ರದೇಶದ ರಾಜ್ಯಗಳು ಮತ್ತೆ ಹಳೆ ಪಿಂಚಣಿ ಜಾರಿಗೊಳಿಸಿವೆ. ಹಳೆ ಪಿಂಚಣಿ ಜಾರಿಗೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಅಲ್ಲದೆ, ಇದಕ್ಕೆ ಸಂಬಂಧಪಟ್ಟ ಸಂಸ್ಥೆಗಳು, ಜನಪ್ರತಿನಿಧಿಗಳು, ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿ ‌ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ :ಪಿಂಚಣಿ ಪ್ರತಿಭಟನೆ ವೇಳೆ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವನ

ABOUT THE AUTHOR

...view details