ಕರ್ನಾಟಕ

karnataka

ETV Bharat / state

ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಡಿಸಿಎಂ ಡಿಕೆ ಶಿವಕುಮಾರ್​ - ಮಾಜಿ ಸಚಿವ ಕೃಷ್ಣಪ್ಪ

ಈಗ ನಾವು ಆಪರೇಷನ್​ ಹಸ್ತ ಮಾಡುವುದಿಲ್ಲ. ನಮ್ಮದು ಕೇವಲ ಕೋಆಪರೇಷನ್​ ಮಾತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

DCM DK Shivakumar celebrated Krishna Janmashtami  Krishna Janmashtami at former BJP MLA house  former BJP MLA house in Bengaluru  DCM DK Shivakumar  ನಾವು ಆಪರೇಷನ್​ ಹಸ್ತ ಮಾಡುವುದಿಲ್ಲ  ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ  ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಡಿಸಿಎಂ ಡಿಕೆ ಶಿವಕುಮಾರ್​ ಡಿಸಿಎಂ ಡಿಕೆ ಶಿವಕುಮಾರ್  ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗಿ  ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್  ಮಾಜಿ ಸಚಿವ ಕೃಷ್ಣಪ್ಪ  ಜನರ ಬದುಕು ಬದಲಾವಣೆ ಮುಖ್ಯ ಎಂದ ಡಿಕೆಶಿ
ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಡಿಸಿಎಂ ಡಿಕೆ ಶಿವಕುಮಾರ್​

By ETV Bharat Karnataka Team

Published : Sep 7, 2023, 7:24 AM IST

ಬೆಂಗಳೂರು:ಡಿಸಿಎಂ ಡಿಕೆ ಶಿವಕುಮಾರ್​ ಅವರು ಬಿಜೆಪಿ ಮಾಜಿ ಶಾಸಕಿ ಅವರ ಮನೆಯಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಡಿಸಿಎಂ ಶಿವಕುಮಾರ್​ ಮಾತನಾಡಿದರು.

ಕೆ ಆರ್ ಪುರಂನಲ್ಲಿ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ಮಾಧ್ಯಮಗಳು ಆಪರೇಷನ್ ಹಸ್ತದ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಆಪರೇಷನ್ ಹಸ್ತ ಮಾಡುವುದಿಲ್ಲ. ನಮ್ಮದು ಕೇವಲ ಕೋ ಆಪರೇಷನ್ ಮಾತ್ರ. ನಾವು ಕೇವಲ ಚುನಾವಣಾ ಸಮಯದಲ್ಲಿ ರಾಜಕಾರಣ ಮಾಡುತ್ತೇವೆ. ಈಗ ರಾಜಕಾರಣ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಮಾಜಿ ಸಚಿವ ಕೃಷ್ಣಪ್ಪ ಅವರು ನಮ್ಮ ನಾಯಕರು. ಅವರ ಸುಪುತ್ರಿ ಪೂರ್ಣಿಮಾ ಅವರು ನನಗೆ ಸಹೋದರಿ ಇದ್ದಂತೆ. ಅವರ ಅಳಿಯ ನನ್ನ ಸ್ನೇಹಿತರು. ಇಂದು ಅವರು ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಮಾಡಿ ಆಹ್ವಾನ ನೀಡಿದ್ದರು. ಹೀಗಾಗಿ ನಾನು ಇಲ್ಲಿಗೆ ಬಂದು ಭಗವಂತನ ಆಶೀರ್ವಾದ ಪಡೆದು ಊಟ ಮಾಡಿದ್ದೇನೆ ಎಂದು ತಿಳಿಸಿದರು.

ಓದಿ:ಇಂಡಿಯಾ ಹೆಸರು ಬದಲಾವಣೆಗೆ ಸಿಎಂ, ಡಿಸಿಎಂ, ರಾಜ್ಯ ಕಾಂಗ್ರೆಸ್ ತೀವ್ರ ಆಕ್ಷೇಪ

ಜನರ ಬದುಕು ಬದಲಾವಣೆ ಮುಖ್ಯ ಎಂದ ಡಿಕೆಶಿ: ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ, 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್​​​​​ಪೋರ್ಟ್​​ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ-ವಿಚಾರ ಬದಲಾವಣೆಯಾಗಬೇಕು. ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿಹಕ್ಕು, ಆರ್​ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು. ಇಂತಹ ಯೋಚನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ ಎಂದು ಡಿಕೆಶಿ ತಿರುಗೇಟು ನೀಡಿದರು.

ABOUT THE AUTHOR

...view details