ಬೆಂಗಳೂರು:ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸರ್ಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಸದಾಶಿವನಗರ ನಿವಾಸದಲ್ಲಿ ಇಂದು ಉತ್ತರಿಸಿ, ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಈ ಕೆಲಸ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದರು.
ಫೆರಿಫೆರಲ್ ರಿಂಗ್ ರಸ್ತೆ ಭೂ ಸ್ವಾಧೀನ ವಿಚಾರವಾಗಿ ಆ ಭಾಗದ ಕೆಲ ರೈತರು ಇಂದು ನನ್ನನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 31 ರಂದು ಆ ರೈತರ ಜೊತೆ ಸಭೆ ಮಾಡುವುದಾಗಿ ತಿಳಿಸಿದ್ದೇನೆ ಎಂದು ಡಿ ಕೆ ಶಿವಕುಮಾರ್ ಇದೇ ವೇಳೆ ತಿಳಿಸಿದರು.
ಇನ್ನು, ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಅಂತ ಈಗ ಸಿಂಗಾಪುರದಲ್ಲಿ ಕುಳಿತು ಆಪರೇಷನ್ ಮಾಡ್ತಿದ್ದಾರೆ ಎಂದು ಡಿಕೆಶಿ ಹೇಳಿದರು.