ಕರ್ನಾಟಕ

karnataka

ETV Bharat / state

ತಾನು ಕಳ್ಳ, ಪರರನ್ನು ನಂಬು ಎನ್ನುವ ಸ್ಥಿತಿ ಬಿಜೆಪಿಯದ್ದು: ಡಿಸಿಎಂ ಡಿಕೆಶಿ ವಾಗ್ದಾಳಿ - etv bharat kannada

DCM DK Shivakumar: 'ತಾನು ಕಳ್ಳ, ಪರರನ್ನು ನಂಬು ಎನ್ನುವ ಸ್ಥಿತಿ ಬಿಜೆಪಿಯದ್ದು' ಎಂದು ಡಿಸಿಎಂ ಡಿಕೆ ಶಿವಕುಮಾರ್​ ಟೀಕಿಸಿದರು.

dcm
ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡುತ್ತಿರುವುದು

By

Published : Aug 19, 2023, 7:27 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡುತ್ತಿರುವುದು

ಬೆಂಗಳೂರು: "ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬು' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ?. ಆಯಾ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ.‌ ಉತ್ತಮ ರಾಜಕೀಯ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಒಳ್ಳೆಯದು, ಕೆಟ್ಟದ್ದು ವ್ಯಕ್ತಿಗತವಾದ ಆಲೋಚನೆ. ಪ್ರಜಾಪ್ರಭುತ್ವ ಉಳಿಯಬೇಕು. ಈ ದೇಶಕ್ಕೆ, ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂಬುದು ಯಾರ್ಯಾರಿಗೆ ಇದೆಯೋ ಅಂತಹ ನಾಯಕರು ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದನ್ನು ನಾವು ನಿರ್ಬಂಧ ಮಾಡಲು ಆಗುತ್ತದೆಯೇ?" ಎಂದು ಪ್ರಶ್ನಿಸಿದರು.

"ಈ ಹಿಂದೆ ಯಾರ್ಯಾರು ಏನು ಮಾತನಾಡಿದರು, ಏನನ್ನು ಮಾತನಾಡಲು ಬಂದಿದ್ದರು ಎಂಬ ವಿಚಾರವನ್ನೆಲ್ಲಾ ಈಗ ಬಿಡಿಸಿ ಹೇಳಬೇಕೆ?. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೀವು ಈ ರೀತಿ ಇರಬೇಕು, ಈ ರೀತಿ ತೀರ್ಮಾನ ತೆಗದುಕೊಳ್ಳಬೇಕು ಎಂದು ನಿರ್ದೇಶನ ಮಾಡಲು ಆಗುವುದಿಲ್ಲ. ವಿಪಕ್ಷಗಳು ಏನು ಬೇಕಾದರೂ ಆರೋಪ ಮಾಡಲಿ ನಮಗೆ ತೊಂದರೆ ಇಲ್ಲ" ಎಂದು ತಿರುಗೇಟು ನೀಡಿದರು.

ಬಳಿಕ ಆ.23 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, "ಮೊದಲು ಅವರ ನಾಯಕರು ಯಾರು ಎಂದು ತೀರ್ಮಾನ ಮಾಡಿಕೊಂಡು ಆಮೇಲೆ ಹೋರಾಟ ಮಾಡಲಿ" ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ:ಪುಟ್ಟರಾಜು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಹೋಗುವುದಿಲ್ಲ: ಶಾಸಕ ಜಿ.ಟಿ.ದೇವೇಗೌಡ

ಈಜಿಪುರ ಮೇಲ್ಸೇತುವೆ ಕಾಮಗಾರಿ ವಿಚಾರವಾಗಿ ಮಾತನಾಡಿದ ಅವರು, "ಈ ಮೇಲ್ಸೇತುವೆ 3 ಕಿ.ಮೀ ಉದ್ದ ಇದ್ದು, ಬಹಳ ವರ್ಷಗಳಿಂದ ಕಾಮಗಾರಿ ನಡೆಯುತ್ತಿದೆ. 2017 ರಲ್ಲಿ ಈ ಯೋಜನೆ ಕಾಮಗಾರಿ ಆರಂಭವಾಗಿದ್ದು, ಕೇವಲ 35% ಮಾತ್ರ ಕೆಲಸ ಆಗಿದೆ. ಕಾಮಗಾರಿ ಮಾಡುತ್ತಿದ್ದ ಗುತ್ತಿಗೆ ಕಂಪನಿಗೆ ಸಮಸ್ಯೆ ಆಗಿ ಕೆಲಸ ನಿಂತಿದೆ. ಅವರಿಗೆ ನೊಟೀಸ್ ನೀಡಿ, ಟೆಂಡರ್ ಅನ್ನು ರದ್ದು ಮಾಡಿದ್ದೇವೆ" ಎಂದು ತಿಳಿಸಿದರು.

"ಅಲ್ಲದೇ, ಮತ್ತೆ ಹೊಸ ಟೆಂಡರ್ ಕರೆಯಲಾಗಿದ್ದು, ಬೇರೆಯವರು ಆಸಕ್ತಿ ತೋರುತ್ತಿಲ್ಲ. ಸಿಂಗಲ್ ಟೆಂಡರ್ ಆಗಿದ್ದು 19% ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ವಾಸ್ತವಾಂಶ ಅರಿಯಲು ಖುದ್ದಾಗಿ ನಾನು ಹಾಗೂ ರಾಮಲಿಂಗಾ ರೆಡ್ಡಿ ಬಂದಿದ್ದೇವೆ. ನಾನು ಸಚಿವನಾಗಿ ನಂತರ ರಾಮಲಿಂಗಾ ರೆಡ್ಡಿ ಅವರು ಈ ಕಾಮಗಾರಿ ಪೂರ್ಣಗೊಳಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಕಾಮಗಾರಿಯನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳುತ್ತೇವೆ. 100 ಕೋಟಿ ಹೆಚ್ಚುವರಿ ಹಣ ಬೇಕಾಗಿದ್ದು, ನಾವೇ ಈ ಯೋಜನೆ ಹೆಚ್ಚುವರಿ ಹಣ ನೀಡಬಹುದೇ ಅಥವಾ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಬಹುದೇ ಎಂದು ಚರ್ಚೆ ಮಾಡುತ್ತೇವೆ" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಮಹದಾಯಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಬದ್ಧ: ಪ್ರಹ್ಲಾದ್ ಜೋಶಿ

ABOUT THE AUTHOR

...view details