ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮದೊಂದಿಗೆ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದರೂ ಡಿಸಿಎಂ ಗೋವಿಂದ ಕಾರಜೋಳ ಕೋವಿಡ್-19ಗೆ ಸಿಲುಕಿದ್ದಾರೆ. ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಡಿಸಿಎಂ ಗೋವಿಂದ ಕಾರಜೋಳಗೆ ಕೊರೊನಾ ಪಾಸಿಟಿವ್ ದೃಢ - ಕಾರಜೋಳಗೆ ಕೊರೊನಾ
ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ನಲ್ಲಿರುವಂತೆ ಕೋರುತ್ತೇನೆ..
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಕಾರಜೋಳ, ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢಪಟ್ಟಿದ್ದು, ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ನಲ್ಲಿರುವಂತೆ ಕೋರುತ್ತೇನೆ.
ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ತಮ್ಮೆಲ್ಲರ ಹಾರೈಕೆಯಿಂದ ಕೊರೊನಾ ವೈರಾಣುವಿನಿಂದ ಶೀಘ್ರ ಗುಣಮುಖವಾಗಿ ಎಂದಿನಂತೆ ಕಾರ್ಯಪ್ರವೃತ್ತನಾಗುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.