ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 20 ಹಳ್ಳಿಗಳ ಸ್ಥಳಾಂತರ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಪರಿಹಾರಕ್ಕಾಗಿ ಪ್ರಸಕ್ತ 2020-21ನೇ ಸಾಲಿನಲ್ಲಿ 10 ಸಾವಿರ ಕೋಟಿಗಳನ್ನು ನಿಗದಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ ಎಂದು ವಿಧಾನ ಪರಿಷತ್ನಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.
ಯುಕೆಪಿಗೆ 10 ಸಾವಿರ ಕೋಟಿ ಘೋಷಿಸಿದ ಸಿಎಂ: ಪರಿಷತ್ಗೆ ಡಿಸಿಎಂ ಕಾರಜೋಳ ಮಾಹಿತಿ
ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 20 ಹಳ್ಳಿಗಳ ಸ್ಥಳಾಂತರ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಪರಿಹಾರಕ್ಕಾಗಿ ಪ್ರಸಕ್ತ 2020-21ನೇ ಸಾಲಿನಲ್ಲಿ 10 ಸಾವಿರ ಕೋಟಿಗಳನ್ನು ನಿಗದಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ ಎಂದು ವಿಧಾನ ಪರಿಷತ್ನಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗಳ ಕ್ರಿಯಾ ಯೋಜನೆ ರೂಪಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಸದನದಲ್ಲಿ ಘೋಷಿಸಿದ್ದಾರೆ. ನೀರಾವರಿ ಇಲಾಖೆಗೆ 21 ಸಾವಿರ ಕೋಟಿ ಅನುದಾನವನ್ನು ಈ ವರ್ಷದ ಆಯವ್ಯದಲ್ಲಿ ಮಂಜೂರಾತಿಗಾಗಿ ಸದನದಲ್ಲಿ ಮಂಡಿಸಿದ್ದರು ಎಂದರು.
ಯೋಜನೆ ಭಾಗದ ಜನ ಪ್ರಸಕ್ತ ಆಯವ್ಯಯದಲ್ಲಿ ಪತ್ಯೇಕ ಅನುದಾನ ನೀಡಿಲ್ಲ ಎಂದು ಭಾವನೆ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿಗಳು ಇಂದು ಸದನದಲ್ಲಿ 10 ಸಾವಿರ ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ. ಹಾಗಾಗಿ ಕೃಷ್ಣಾ ಮೇಲ್ದಂಡೆ ಯೋಜನೆ ಭಾಗದ ಐದು ಜಿಲ್ಲೆಗಳ ಸಂತ್ರಸ್ತರು, ರೈತರು ಹಾಗೂ ಎಲ್ಲರ ಪರವಾಗಿ ಆಭಾರಿಯಾಗಿದ್ದು, ಎಲ್ಲರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.