ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಸರ್ವ ಜನಾಂಗದ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ 2020-21ನೇ ಸಾಲಿನ ಆಯವ್ಯಯವನ್ನು ಇಂದು ಮಂಡಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಈ ಬಜೆಟ್: ಗೋವಿಂದ ಕಾರಜೋಳ - ಬೆಂಗಳೂರು
ರಾಜ್ಯದ ಸರ್ವ ಜನಾಂಗದ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ 2020-21ನೇ ಸಾಲಿನ ಆಯವ್ಯಯವನ್ನು ಇಂದು ಮಂಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಗೋವಿಂದ ಕಾರಜೋಳ
ನೆರೆ-ಬರ, ರೈತರ ಸಾಲಮನ್ನಾ ಯೋಜನೆಯ ವ್ಯವಸ್ಥಿತ ಅನುಷ್ಠಾನ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗಾಗಿ ಅತ್ಯುತ್ತಮವಾದ ಆಯವ್ಯಯವನ್ನು ಮಂಡಿಸಿದ್ದಾರೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಗೆ ನೀರಾವರಿ ಇಲಾಖೆಯು ಕ್ರಿಯಾ ಯೋಜನೆ ಸಿದ್ಧಪಡಿಸುವ ಸಂದರ್ಭದಲ್ಲಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಮಗಾರಿಗಳಿಗೆ 10 ಸಾವಿರ ಕೋಟಿ ರೂ. ಅನುದಾನವನ್ನು ಒದಗಿಸುವ ಭರವಸೆ ನೀಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.