ಬೆಂಗಳೂರು: ನಾಳೆ ಉಪ ಚುನಾವಣಾ ಫಲಿತಾಂಶ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಡಿಸಿಎಂ ಗೋವಿಂದ ಕಾರಜೋಳ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ರು.
ನಾಳೆ ಉಪ ಸಮರದ ಫಲಿತಾಂಶ: ಸಿಎಂ ಬಿಎಸ್ವೈ ನಿವಾಸಕ್ಕೆ ಡಿಸಿಎಂ, ಗೃಹ ಸಚಿವರ ಭೇಟಿ - dcm home minister visits to cm residence latest news
ಉಪ ಚುನಾವಣಾ ಫಲಿತಾಂಶ ಹಿನ್ನೆಲೆ ಸಿಎಂ ಬಿಎಸ್ವೈ ನಿವಾಸಕ್ಕೆ ಡಿಸಿಎಂ ಗೋವಿಂದ ಕಾರಜೋಳ ಹಾಗೂ ಗೃಹ ಸಚಿವರು ಭೇಟಿ ನೀಡಿದ್ರು.
ಸಿಎಂ ಬಿಎಸ್ವೈ ನಿವಾಸಕ್ಕೆ ಡಿಸಿಎಂ ಭೇಟಿ
15 ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ನಾಳೆ ಬರಲಿದ್ದು, ಎಲ್ಲರ ಚಿತ್ತ ಫಲಿತಾಂಶದತ್ತ ಇದೆ. ಇನ್ನು ಇಂದು ಮುಂಜಾನೆ ಡಿಸಿಎಂ ಕಾರಜೋಳ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಯಿ ನಾಳೆಯ ಫಲಿತಾಂಶ ಕುರಿತು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಯಲ್ಲಿ ಚರ್ಚೆ ನಡೆಸಿದ್ರು.
ಇನ್ನು ಗೃಹ ಸಚಿವ ಬೊಮ್ಮಾಯಿಯವರು ನಾಳೆಯ ಭದ್ರತೆ ಹಾಗೂ ಮತ ಎಣಿಕೆ ಕೇಂದ್ರಗಳ ಕುರಿತು ಮಾಹಿತಿ ನೀಡಿದ್ರು. ಚರ್ಚೆಯ ಬಳಿಕ ಸಿಎಂ ಯಡಿಯೂರಪ್ಪ ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿ.ಆರ್.ಅಂಬೇಡ್ಕರ್ ಭವನ ಹಾಗೂ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಉದ್ಘಾಟನೆಗೆ ತೆರಳಿದರು.