ಬೆಂಗಳೂರು: ಹುಬ್ಬಳ್ಳಿಯು ಉತ್ತರ ಕರ್ನಾಟಕದ ಪ್ರಮುಖ ನಗರವಾಗಿದ್ದು, ಆದ್ಯತೆ ಮೇರೆಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿ ಇಂದು ಸಂಜೆ ನಡೆದ ಹುಬ್ಬಳ್ಳಿ - ಧಾರವಾಡ ಬೈಪಾಸ್ ಮತ್ತು ಹುಬ್ಬಳ್ಳಿ ಧಾರವಾಡ ವೃತ್ತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಸೂಚಿಸಿದರು.
ರಾಜ್ಯದಲ್ಲಿ ಅತಿವೃಷ್ಠಿಯಿಂದ ₹8 ಸಾವಿರ ಕೋಟಿ ವೆಚ್ಚದ ರಸ್ತೆಗಳು ಹಾನಿಗೊಳಗಾಗಿವೆ. ₹ 2,600 ಕೋಟಿ ವೆಚ್ಚದ ಬಿಲ್ಲುಗಳ ಬಾಕಿ ಇವೆ. ಸಿಆರ್ಎಫ್ ಯೋಜನೆಯಡಿಯಲ್ಲೂ ₹600 ಕೋಟಿ ವೆಚ್ಚದ ಬಿಲ್ಲುಗಳು ಬಾಕಿ ಇವೆ. ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.