ಕರ್ನಾಟಕ

karnataka

ETV Bharat / state

ಖಾದರ್ ಪ್ರಚೋದನಕಾರಿ ಭಾಷಣವೇ ಮಂಗಳೂರಿನ ಗಲಭೆಗೆ ಕಾರಣ : ಡಿಸಿಎಂ ಸವದಿ - ಬೆಂಗಳೂರಿನಲ್ಲಿ ಲಕ್ಷ್ಮಣ ಸವದಿ ಹೇಳಿಕೆ

ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರ ಪ್ರಚೋದನಕಾರಿ ಭಾಷಣವೇ ಅಲ್ಲಿನ ಗಲಭೆಗೆ ಕಾರಣವಾಗಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

DCM Laxman Savadi statement, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ
ಡಿಸಿಎಂ ಸವದಿ ಹೇಳಿಕೆ

By

Published : Dec 20, 2019, 1:30 PM IST

ಬೆಂಗಳೂರು: ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರ ಪ್ರಚೋದನಕಾರಿ ಭಾಷಣವೇ ಅಲ್ಲಿನ ಗಲಭೆಗೆ ಕಾರಣವಾಗಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

ಡಿಸಿಎಂ ಸವದಿ ಹೇಳಿಕೆ

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸಿಎಎ ಜಾರಿಯಿಂದ ನಮ್ಮ ದೇಶದ ಯಾವುದೇ ಸಮುದಾಯ ಮತ್ತು ಜನಾಂಗಕ್ಕೆ ಅನ್ಯಾಯವಾಗುವುದಿಲ್ಲ. ಹಲವು ವರ್ಷಗಳಿಂದ ಧಾರ್ಮಿಕ ಶೋಷಣೆ ಎದುರಿಸಿ ಭಾರತಕ್ಕೆ ಬಂದಿರುವ ಜನರಿಗೆ ಪೌರತ್ವ ಕೊಡುವ ಕಾಯ್ದೆ ಇದಾಗಿದೆ. ಕಾಯ್ದೆಯಿಂದ ರಾಷ್ಟ್ರದಲ್ಲಿ ಭದ್ರತೆ ಮತ್ತು ಏಕತೆ ಮತ್ತಷ್ಟು ಬಲಗೊಳ್ಳಲಿದೆ ಎಂದು ತಿಳಿಸಿದರು.

ಖಾದರ್ ಪ್ರಚೋದನಕಾರಿ ಹೇಳಿಕೆಯಿಂದ‌ ಎಲ್ಲ ಸಮುದಾಯದವರಲ್ಲಿ ತಪ್ಪು ಸಂದೇಶ ರವಾನೆಯಾಗಿದೆ. ಜನರಿಗೆ ತಪ್ಪು ಮಾಹಿತಿ ರವಾನೆ ಮಾಡಿ ರಾಜ್ಯದಲ್ಲಿ ಗಲಭೆಗಳನ್ನು ಹುಟ್ಟು ಹಾಕಲಾಗಿದೆ. ರಾಷ್ಟ್ರೀಯ ಹಿತಕ್ಕಾಗಿ ಈ ಕಾನೂನು ತರಲಾಗಿದೆ. ರಾಷ್ಟ್ರೀಯ ಏಕತೆ ಮತ್ತು ಸುಭದ್ರತೆಗಾಗಿ ಕಾನೂನು ಜಾರಿಯಾಗಿದೆ. ಇದರಲ್ಲಿ ಎಲ್ಲರೂ ಕೈ ಜೋಡಿಸಬೇಕು. ಎಲ್ಲರೂ ಕೂಡ ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಶಾಂತಿಯುತ ಪ್ರತಿಭಟನೆ ಮಾಡುವ ಎಲ್ಲರಿಗೂ ಅವಕಾಶವಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಮೂಲಕ ತಮ್ಮ ಪ್ರತಿಭಟನೆ ದಾಖಲಿಸಬೇಕು. ಅದನ್ನು ಬಿಟ್ಟು ಬಸ್ಸುಗಳ ಮೇಲೆ ಕಲ್ಲುತೂರಾಟ ಮಾಡಿ ಬಸ್ಸುಗಳಿಗೆ ಹಾನಿ ಮಾಡಬಾರದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಹೇಳಿದರು.

ರೈಲು ಮೇಲೆ ದಾಳಿ ಮಾಡುವವರ ವಿರುದ್ಧ ಗುಂಡು ಹಾರಿಸಿ ಅನ್ನೋ ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸವದಿ, ಆವೇಶದ ಭರದಲ್ಲಿ ಅಂಗಡಿಯವರು ಹೇಳಿರಬೇಕು ಅಷ್ಟೇ. ಆ ರೀತಿ ಮಾಡಲು ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ABOUT THE AUTHOR

...view details