ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದ ಡಿಸಿಎಂ ಪವಾರ್ ಹೇಳಿಕೆ ಖಂಡಿಸಿದ ಡಿಸಿಎಂ ಸವದಿ

ನಿಪ್ಪಾಣಿ, ಬೆಳಗಾವಿ, ಕಾರವಾರದ ಅನೇಕ ಭಾಗಗಳು ಮಹಾರಾಷ್ಟ್ರಕ್ಕೆ ಸೇರಿ ಇವೆ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ನೀಡಿರುವ ಹೇಳಿಕೆಯನ್ನು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಖಂಡಿಸಿದ್ದಾರೆ.

ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ
ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

By

Published : Nov 18, 2020, 3:56 PM IST

Updated : Nov 18, 2020, 4:24 PM IST

ಬೆಂಗಳೂರು:ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ಉದ್ಧಟತನದ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಹೇಳಿದ್ದಾರೆ.

ಪವಾರ್ ಹೇಳಿಕೆ ಖಂಡಿಸಿದ ಡಿಸಿಎಂ ಸವದಿ

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಪ್ಪಾಣಿ, ಬೆಳಗಾವಿ, ಕಾರವಾರದ ಅನೇಕ ಭಾಗಗಳು ಮಹಾರಾಷ್ಟ್ರಕ್ಕೆ ಸೇರಿವೆ ಎಂದು ಅಜಿತ್ ಪವಾರ್ ಹೇಳಿಕೆ ನೀಡಿರುವುದು ಉದ್ದಟತದಿಂದ ಕೂಡಿದೆ ಎಂದಿದ್ದಾರೆ.

ಹಿಂದೆ ಸೊಲ್ಲಾಪುರದಲ್ಲಿ ಕುಡಿಯುವ ನೀರಿನ ವಿಷಯದಲ್ಲಿ ಇದೇ ರೀತಿ ಹೇಳಿಕೆ ಕೊಟ್ಟ ಪರಿಣಾಮ ಏನಾಯಿತು ಎಂದು ಗೊತ್ತಿದೆ. ಸೂರ್ಯ-ಚಂದ್ರ ಇರುವವರೆಗೆ ನಿಪ್ಪಾಣಿ, ಬೆಳಗಾವಿ, ಕಾರವಾರ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಅವರು ತಿರುಗೇಟು ನೀಡಿದ್ದಾರೆ.

Last Updated : Nov 18, 2020, 4:24 PM IST

ABOUT THE AUTHOR

...view details