ಕರ್ನಾಟಕ

karnataka

ETV Bharat / state

ಐಟಿ ದಾಳಿ ರಾಜಕೀಯ ಪ್ರೇರಿತ: ಡಿಸಿಎಂ ಪರಮೇಶ್ವರ್ - ದಾಳಿ

ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆಸಿದ್ದರು. ಈಗ ಲೋಕಸಭಾ ಚುನಾವಣೆ ವೇಳೆ ಕೂಡ ದಾಳಿ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಗೆ ದಾಳಿ ಮಾಡುವ ಸ್ವಾತಂತ್ರ್ಯವಿದೆ. ಆದರೆ, ಬಿಜೆಪಿ ನಾಯಕರ ಮನೆ ಮೇಲೆ ಯಾಕೆ ದಾಳಿಯಾಗುವುದಿಲ್ಲ ಎಂದು ಪರಮೇಶ್ವರ್​ ಪ್ರಶ್ನಿಸಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

By

Published : Mar 28, 2019, 1:28 PM IST

ಬೆಂಗಳೂರು:ಸಿಎಂ ಆಪ್ತರ ಮನೆಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ನೀಡಿದ ಮಾಹಿತಿಯಂತೆ ಇಂದು ಸಚಿವ ಪುಟ್ಟರಾಜು ಅವರ ಮನೆ ಮೇಲೆ ದಾಳಿ ನಡೆದಿದೆ. ಇದು ಸಂಪೂರ್ಣ ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿದೆ ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದರು ಎಂದರು.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಈಗ ಲೋಕಸಭಾ ಚುನಾವಣೆ ವೇಳೆ ಕೂಡ ದಾಳಿ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಗೆ ದಾಳಿ ಮಾಡುವ ಸ್ವಾತಂತ್ರ್ಯವಿದೆ. ಆದರೆ, ಬಿಜೆಪಿ ನಾಯಕರ ಮನೆ ಮೇಲೆ ಯಾಕೆ ದಾಳಿಯಾಗುವುದಿಲ್ಲ ಎಂದು ಡಿಸಿಎಂ ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಐಟಿಯನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಜನರಿಗೆ ಗಮನಕ್ಕೆ ತರುತ್ತೇವೆ. ಕೇಂದ್ರ ಸರ್ಕಾರ ಎಷ್ಟೇ ದಾಳಿ ಅಸ್ತ್ರ ಪ್ರಯೋಗಿಸಿದರೂ ಅದಕ್ಕೆ ನಾವು ಅಂಜುವುದಿಲ್ಲ. ಜನರು ನಮ್ಮ ಜೊತೆ ಇದ್ದಾರೆ.ದಾಳಿ ಮುಂದುವರಿದರೆ ತಕ್ಕ ಉತ್ತರ ನೀಡಲಾಗುವುದು ಎಂದು ಪರಮೇಶ್ವರ್​​ ಎಚ್ಚರಿಕೆ ರವಾನಿಸಿದ್ದಾರೆ.

ABOUT THE AUTHOR

...view details