ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸದಾಶಿವನಗರದ ನಿವಾಸಕ್ಕೆ ಭಾನುವಾರ ಸಂಜೆ ಭೇಟಿ ನೀಡಿ ಕಾವೇರಿ ನೀರು ಹಂಚಿಕೆ ಸಂಕಷ್ಟದ ಬಗ್ಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಳೆ ಅಭಾವದಿಂದ ರಾಜ್ಯಕ್ಕೆ ಬಂದೊದಗಿರುವ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ತಮ್ಮ ಆಳ್ವಿಕೆಯ ಸಂದರ್ಭದಲ್ಲಿ ಇಂಥದ್ದೇ ಪರಿಸ್ಥಿತಿ ಎದುರಿಸಿದ್ದ ಕೃಷ್ಣ ಅವರಿಂದ ಡಿಕೆಶಿ ಸಲಹೆಗಳನ್ನೂ ಪಡೆದರು.
ಇದಕ್ಕೂ ಮುಂಚೆ ಕುಮಾರಪಾರ್ಕ್‌ನಲ್ಲಿರುವ ಚಿತ್ರಕಲಾ ಪರಿಷತ್‌ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಎಂ ಕೃಷ್ಣ, ಯಾವಾಗ ಮಳೆ ಕಡಿಮೆಯಾಗುತ್ತದೋ ಆಗ ಕಾವೇರಿ ನದಿ ನೀರಿನ ವಿವಾದ ಸದ್ದು ಮಾಡುತ್ತದೆ. ಮಳೆಗಾಲ ಕ್ಷೀಣಿಸಿದಾಗ ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಒತ್ತಡ ಬರುತ್ತದೆ. ತಮಿಳುನಾಡಿನವರ ಹೇಳಿಕೆಗಳು ಬಹಳ ಮಟ್ಟಿಗೆ ವಸ್ತುಸ್ಥಿತಿಯನ್ನು ನಾಚಿಸುವಂತಿರುತ್ತವೆ.