ಸೈಕಲ್ ಜಾಥಾ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ: ಡಿಸಿಪಿ ಚೇತನ್ ಸಿಂಗ್ ರಾಥೋಡ್ - Central Division DCP Chetan Singh Rathod
ಕೊರೊನಾದ ಕಾರಣ ಕಾಂಗ್ರೆಸ್ ಪಕ್ಷದ ಸೈಕಲ್ ಜಾಥಾಗೆ ಅನುಮತಿ ನಿರಾಕರಿಸಲಾಗಿತ್ತು. ಆದರೆ, ಇದ್ಯಾವುದನ್ನೂ ಲೆಕ್ಕಿಸದೇ ಕಾನೂನು ನಿಯಮಗಳನ್ನು ಉಲ್ಲಂಘಿಸಿರುವ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.
ಡಿಸಿಪಿ ಚೇತನ್ ಸಿಂಗ್ ರಾಥೋಡ್
ಬೆಂಗಳೂರು: ಪೊಲೀಸ್ ಇಲಾಖೆ ಅನುಮತಿ ನೀಡದ ಹೊರತಾಗಿಯೂ ಕಾಂಗ್ರೆಸ್ ಪಕ್ಷದಿಂದ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ಮಾಡಲಾಗಿದೆ. ಹೀಗಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.
ಇನ್ನು ಇವರ ಜಾಥಾದಿಂದಾಗಿ ಕಬ್ಬನ್ ಪಾರ್ಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಮತ್ತೊಂದೆಡೆ ಈಗಾಗಲೇ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಪೊಲೀಸರು ದೂರದಿಂದಲೇ ನಿಂತು ಪರಿಸ್ಥಿತಿ ನಿಭಾಯಿಸುವಲ್ಲಿ ಪ್ರಯತ್ನಿಸಿದರು.