ಬೆಂಗಳೂರು : ನಗರದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬೆಡ್, ಆಕ್ಸಿಜನ್ ಸಿಗದೆ ಸೋಂಕಿತರು ಸಾಯುತ್ತಿದ್ದಾರೆ. ಮತ್ತೊಂದೆಡೆ ನಾನ್ ಕೋವಿಡ್ ರೋಗಿಗಳು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ.
ಜೀವ ಉಳಿಸಿಕೊಳ್ಳಲು ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಮಹತ್ವ ನೀಡುತ್ತಿರುವುದರಿಂದ ನಾನ್ ಕೋವಿಡ್ ರೋಗಿಗಳ ಪಾಡು ಹೇಳ ತೀರದಾಗಿದೆ.
ಹೊಸದಾಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೂ ನೆಗೆಟಿವ್ ವರದಿ ನೀಡಿ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ ಎಂದು ನೋಡಲ್ ಅಧಿಕಾರಿ ಹಾಗೂ ಕಮಾಂಡ್ ಸೆಂಟರ್ ಡಿಸಿಪಿ ಇಶಾಪಂತ್ ಟ್ವಿಟರ್ನಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.