ಬೆಂಗಳೂರು: ಹುಳಿಮಾವು ಕೆರೆ ದುರಂತಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನೀರಾವರಿ ಮಂಡಳಿ ಸಹಾಯಕ ಎಂಜಿನಿಯರ್ ಕಾರ್ತಿಕ್ ಹಾಗೂ ಶಿಲ್ಪಾ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂತ್ ತಿಳಿಸಿದ್ದಾರೆ.
ಹುಳಿಮಾವು ಕೆರೆ ದುರಂತ ಸಂಬಂಧ ಐವರ ವಿಚಾರಣೆ ನಡೆಸಲಾಗಿದೆ: ಡಿಸಿಪಿ ಇಶಾ ಪಂತ್ - Hulimavu lake tragedy accused will arrest soon DCP Isha Panth
ಹುಳಿಮಾವು ಕೆರೆ ದುರಂತಕ್ಕೆ ಸಂಬಂಧಪಟ್ಟಂತೆ ಇದುವರೆಗೆ ಐವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂತ್ ತಿಳಿಸಿದರು.
ಡಿಸಿಪಿ , ಇಶಾ ಪಂತ್
ಘಟನೆಗೆ ಸಂಬಂಧಪಟ್ಟಂತೆ ಇದುವರೆಗೆ ಐದಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನೂ ಯಾರನ್ನೂ ಬಂಧಿಸಿಲ್ಲ, ಕೇವಲ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕೆರೆ ಸುತ್ತಮುತ್ತಲಿನ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಕೆಲ ಹೋಂಗಾರ್ಡ್ ಮತ್ತು ಪಾಲಿಕೆಯ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಪಡಿಸಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು.