ಬೆಂಗಳೂರು:ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆರೋಪ ಪ್ರಕರಣದ ತನಿಖೆಯನ್ನು ಉತ್ತರ ವಿಭಾಗ ಡಿಸಿಪಿಯವರಿಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿಪಿಯವರ ತಂಡವು ಶ್ರೀಮಂತ್ ಪಾಟೀಲ್ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ತೆರಳಲಿದೆ.
ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆರೋಪ: ಡಿಸಿಪಿ ತಂಡದಿಂದ ತನಿಖೆ - undefined
ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆರೋಪ ಪ್ರಕರಣದ ತನಿಖೆಯನ್ನು ಉತ್ತರ ವಿಭಾಗ ಡಿಸಿಪಿ ನಡೆಸಲಿದ್ದಾರೆ.
ಪಾಟೀಲ್
ನಿನ್ನೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆಗಿದ್ದಾರೆ ಎಂದು ದೂರು ದಾಖಲಾಗಿತ್ತು. ಆಗ ಗೃಹ ಸಚಿವ ಎಂ.ಬಿ ಪಾಟೀಲ್ ಅವರು ನಗರ ಆಯುಕ್ತ ಅಲೋಕ್ ಕುಮಾರ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉತ್ತರ ವಿಭಾಗ ಡಿಸಿಪಿ ನೇತೃತ್ವದ ತಂಡ ಶ್ರೀಮಂತ್ ಪಾಟೀಲ್ ಹೇಳಿಕೆ ಪಡೆದು ತನಿಖೆ ಮುಂದುವರೆಸಲಿದೆ.
ಸದ್ಯ ಶಾಸಕರು ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿಜವಾಗಲೂ ಎದೆ ನೋವಿನಿಂದ ಆಸ್ಪತ್ರೆ ಸೇರಿದ್ದಾರಾ ಅಥವಾ ಬೇರೆ ಏನಾದರೂ ಕಾರಣವಿದೆಯಾ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.