ಬೆಂಗಳೂರು:ನಾಡಿನ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿ, ಕೃಷಿಕ ಮನೆತನದಲ್ಲಿ ಜನಿಸಿ, ಉದ್ಯಮದತ್ತ ಮುಖ ಮಾಡಿದ ಆರ್.ಎನ್.ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು ಎಂದು ತಿಳಿಸಿದ್ದಾರೆ.
ವಿಶ್ವೇಶ್ವರ ಹೆಗಡೆ ಕಾಗೇರಿ, ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಸಂತಾಪ ಸೂಚಿಸಿ, ಭಗವಂತ ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಓದಿ:ಶಿಕ್ಷಣ ಪ್ರೇಮಿ, ಮುರುಡೇಶ್ವರದ ನಿರ್ಮಾತೃ ಆರ್.ಎನ್. ಶೆಟ್ಟಿ ನಿಧನ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಟ್ವೀಟ್ ಮಾಡಿದ್ದು, ಉದ್ಯಮಿ ಡಾ. ಆರ್.ಎನ್. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು ಎಂದು ತಿಳಿಸಿದ್ದಾರೆ.