ಕರ್ನಾಟಕ

karnataka

ETV Bharat / state

ಉಕ್ರೇನ್​ನಲ್ಲಿ ಹಾವೇರಿ ವಿದ್ಯಾರ್ಥಿ ನವೀನ್ ಸಾವು: ಡಿ.ಕೆ. ಶಿವಕುಮಾರ್ ವಿಷಾದ

ಉಕ್ರೇನ್​ನಲ್ಲಿ ಹಾವೇರಿ ವಿದ್ಯಾರ್ಥಿ ಸಾವನ್ನಪ್ಪಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಬೇಸರ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Death of Haveri student Naveen in Ukraine D K  Shivakumar regrets
ಉಕ್ರೇನ್ ನಲ್ಲಿ ಹಾವೇರಿ ವಿದ್ಯಾರ್ಥಿ ನವೀನ್ ಬಲಿ: ಡಿ.ಕೆ. ಶಿವಕುಮಾರ್ ವಿಷಾದ

By

Published : Mar 1, 2022, 9:29 PM IST

ಬೆಂಗಳೂರು: ನಮ್ಮ ವಿದ್ಯಾರ್ಥಿ ಉಕ್ರೇನ್​ನಲ್ಲಿ ಬಲಿಯಾಗಿರುವುದು ಬಹಳ ಆತಂಕ ಮೂಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ಉಕ್ರೇನ್ ನಲ್ಲಿ ಹಾವೇರಿ ವಿದ್ಯಾರ್ಥಿ ನವೀನ್ ಬಲಿ: ಡಿ.ಕೆ. ಶಿವಕುಮಾರ್ ವಿಷಾದ

ಮೇಕೆದಾಟು ಪಾದಯಾತ್ರೆಗೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ಸಂದರ್ಭ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಮ್ಮ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಅಲ್ಲಿಗೆ ತೆರಳಿದ್ದಾರೆ. ನಮ್ಮಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜುಗಳಿದ್ದರೂ ಬೇಡಿಕೆ ಹೆಚ್ಚಾಗಿರುವುದರಿಂದ ಸಾಕಷ್ಟು ವಿದ್ಯಾರ್ಥಿಗಳು ಉಕ್ರೇನ್​ಗೆ ತೆರಳಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದರು.

ವಿಶ್ವದ ಇತರೆ ದೇಶಗಳು ತಮ್ಮ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಂಡಿದ್ದರೆ, ನಮ್ಮ ಕೇಂದ್ರ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ. ನಿನ್ನೆಯಷ್ಟೇ ನಾಲ್ವರು ಸಚಿವರನ್ನು ವಿದ್ಯಾರ್ಥಿಗಳ ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ. ಕೇಂದ್ರ ಸರ್ಕಾರಕ್ಕೆ ಎಷ್ಟು ಬೇಜವಾಬ್ದಾರಿ ಇದೆ ಎಂಬುದನ್ನು ಇದು ತೋರುತ್ತದೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ವಿದ್ಯಾರ್ಥಿಗಳ ರಕ್ಷಣೆ ವಿಚಾರದಲ್ಲಿ ವಿಫಲವಾಗಿವೆ. ಇನ್ನಾದರೂ ತುರ್ತು ಕ್ರಮ ಕೈಗೊಂಡು ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆಸಿಕೊಳ್ಳಬೇಕು. ಪ್ರಧಾನಿ ಅವರು ತಾವು ವಿಶ್ವಗುರು ಎಂದು ಬಿಂಬಿಸಿಕೊಳ್ಳುತ್ತಾರೆ. ಇದೇನಾ ವಿಶ್ವಗುರುವಿನ ಲಕ್ಷಣ? ಈ ವಿಚಾರವನ್ನು ನಿಮಗೆ ಬಿಡುತ್ತೇನೆ. ವಿದ್ಯಾರ್ಥಿಗಳ ಪೋಷಕರ ದುಃಖ, ದುಮ್ಮಾನವನ್ನು ನೀವು ನೋಡುತ್ತಿದ್ದೀರಿ. ಕೇವಲ ಬಾಯಿ ಮಾತಲ್ಲಿ ರಕ್ಷಣೆ ಮಾಡುತ್ತೇವೆ ಎಂದರೆ ಸಾಲದು, ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಸಲಹೆ ನೀಡಿದರು.

ನಮ್ಮ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದ್ದು, ಭಾರತೀಯರು ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಸರ್ಕಾರ ಈ ಕೂಡಲೇ ಯುದ್ಧದಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಪಾರ್ಥಿವ ಶರೀರದ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ: ನವೀನ್​ ತಂದೆಗೆ ಸಿಎಂ ಭರವಸೆ

For All Latest Updates

ABOUT THE AUTHOR

...view details