ಕರ್ನಾಟಕ

karnataka

By

Published : Nov 7, 2019, 3:56 PM IST

ETV Bharat / state

ಬಿಎಸ್‌ವೈ ಆಡಿಯೋ ಕ್ಲಿಪ್ ಬಗ್ಗೆ ರಾಷ್ಟ್ರಪತಿಗೆ ದೂರು: ಸಿದ್ದರಾಮಯ್ಯ ಹೇಳಿಕೆ

ಆಪರೇಷನ್​ ಕಮಲದ ವಿಚಾರವಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಇದೀಗ ಈ ಬಗ್ಗೆ ರಾಷ್ಟ್ರಪತಿಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ

ಬೆಂಗಳೂರು:ಆಪರೇಷನ್ ಕಮಲ ಸಂಬಂಧದ ಯಡಿಯೂರಪ್ಪ ಆಡಿಯೋ ಕ್ಲಿಪ್ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ‌.

ಕೆಪಿಸಿಸಿ ಕಚೇರಿಯಲ್ಲಿ ‌ಮಾತನಾಡಿದ ಅವರು,ಆಪರೇಷನ್ ಕಮಲದ ಆಡಿಯೋ ಕ್ಲಿಪ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಸಿಎಂ ಯಡಿಯೂರಪ್ಪ ಭಾಗಿಯಾಗಿವುದು ಸ್ಪಷ್ಟವಾಗಿದೆ. ಈ ಮೂಲಕ ಪಕ್ಷಾಂತರ ಹಾಗು ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿದ್ದಾರೆ. ಕುದುರೆ ವ್ಯಾಪಾರ ಮಾಡಿದ್ದು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸಿದ್ದಾರೆ. ಹಾಗಾಗಿ ಈ ಬಗ್ಗೆ ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಲಿದ್ದೇವೆ ಎಂದರು.

ಸಾಂವಿಧಾನಿಕ ಹುದ್ದೆಯಲ್ಲಿರುವವರು ಈ ರೀತಿ ಮಾಡಿದರೆ ಹೇಗೆ? ಇದು 10ನೇ ಶೆಡ್ಯೂಲ್‌ನ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಷ್ಟ್ರಪತಿಗಳ ಮೂಲಕ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ‌ ಕೊಡಬೇಕೆಂದು ಒತ್ತಾಯಿಸಲಿದ್ದೇವೆ ಎಂದು ತಿಳಿಸಿದ್ರು.

ಉಪ ಚುನಾವಣೆ ಅಭ್ಯರ್ಥಿ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಂಟು ಕ್ಷೇತ್ರಗಳ ಟಿಕೆಟ್ ಘೋಷಣೆ‌ಯಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಉಳಿದ ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಿದ್ದೇವೆ‌ ಎಂದು ಮಾಹಿತಿ ನೀಡಿದ್ರು.

ಟಿಪ್ಪು ವಿಚಾರ ಪಠ್ಯದಿಂದ ತೆಗೆಯುವ ವಿಚಾರವಾಗಿ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಸಭೆ ನಡೆಯುತ್ತಿರುವ ಬಗ್ಗೆ ಗೊತ್ತಾಗಿದೆ. ಒಂದು ವೇಳೆ ಪಠ್ಯದಿಂದ ಟಿಪ್ಪು ವಿಚಾರಗಳನ್ನು ತೆಗೆದರೆ ಮೈಸೂರು ಇತಿಹಾಸ ಅಪೂರ್ಣವಾಗುತ್ತದೆ ಎಂದು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು.

ABOUT THE AUTHOR

...view details