ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ರೈತರ ಜಮೀನಿಗೆ ಹೆಚ್ಚಿನ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಸಂಬಂಧ ರೈತರ ಜಮೀನಿಗೆ ಮಾರ್ಗಸೂಚಿ ಬೆಲೆ ನಿಗದಿ ವಿಚಾರವಾಗಿ ಸಂಪುಟ ಉಪ ಸಮಿತಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, 26 ಸಾವಿರ ಎಕರೆ ಭೂ ಸ್ವಾಧೀನಕ್ಕೆ ಪರಿಹಾರ ನೀಡಲಾಗಿದೆ. ಇನ್ನೂ 50 ಸಾವಿರ ಎಕರೆಗೆ ಪರಿಹಾರ ನೀಡಬೇಕಿದೆ. ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. ರೈತರು ಹೆಚ್ಚಿನ ಪರಿಹಾರಕ್ಕೆ ಆಗ್ರಹ ಮಾಡಿದ್ದಾರೆ. ಸದ್ಯ ಎಕರೆಗೆ ಪರಿಹಾರ 1.5 ಲಕ್ಷದಷ್ಟಿದೆ.
ಮೂರು ಪಟ್ಟು ಅಂದ್ರೆ 8 ಲಕ್ಷದಷ್ಟು ಆಗಬಹುದು. ಆದರೆ ರೈತರು ಇನ್ನೂ ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ರೈತರಿಗೆ ಅನುಕೂಲ ಅಂತ ಭಾವಿಸಿ ಮಾನವೀಯತೆ ದೃಷ್ಟಿಯಿಂದ ಹೆಚ್ಚಳ ಮಾಡುತ್ತೇವೆ ಎಂದರು.