ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದೇನೆ, ಹೆಚ್​ಡಿಕೆ ಬಗ್ಗೆ ಗೌರವ ಇದೆ: ಮಧು ಬಂಗಾರಪ್ಪ - ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಇವತ್ತು ಅಧಿಕೃತವಾಗಿ ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ. ಇಂದಿನಿಂದಲೇ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ದೊಡ್ಡ ಸಮಾವೇಶ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

decided-to-join-congress-madhu-bangarappa
ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದೇನೆ

By

Published : Mar 11, 2021, 2:01 PM IST

ಬೆಂಗಳೂರು: ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತವಾಗಿ ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ ಎಂದು ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಇವತ್ತು ಬಂದು ಅಧಿಕೃತವಾಗಿ ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ. ಇಂದಿನಿಂದಲೇ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ದೊಡ್ಡ ಸಮಾವೇಶ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ. ನಾಳೆ ಕೆಪಿಸಿಸಿ ಅಧ್ಯಕ್ಷರನ್ನೂ ಭೇಟಿಯಾಗಿ ಈ ಸಂಬಂಧ ಚರ್ಚೆ ನಡೆಸುತ್ತೇನೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದೇನೆ, ಹೆಚ್​ಡಿಕೆ ಬಗ್ಗೆ ಗೌರವ ಇದೆ: ಮಧು ಬಂಗಾರಪ್ಪ

ಸಿದ್ದರಾಮಯ್ಯ ಹಿರಿಯರು, ಅವರು ಸಿಎಂ ಆಗಿದ್ದವರು. ನಮ್ಮ ತಂದೆನೂ ಸಿಎಂ ಆಗಿದ್ದವರು. ಹೀಗಾಗಿ ಅವರನ್ನು ಭೇಟಿಯಾಗಿದ್ದೇನೆ. ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರನ್ನು ಭೇಟಿ ಆಗಿ, ಸಮಾಲೋಚನೆ ನಡೆಸುತ್ತೇನೆ ಎಂದರು.

ದ್ರೋಹ ಮಾಡಿದ್ದಾರೆ ಹೆಚ್.ಡಿ.ಕುಮಾರಸ್ವಾಮಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಆ ಬಗ್ಗೆ ಏನು ಹೇಳೋದಿಲ್ಲ‌. ನನಗೆ ಅವರ ಬಗ್ಗೆ ವೈಯಕ್ತಿಕ ಗೌರವ ಇದೆ. ಒಂದು ವರ್ಷ ಸುದೀರ್ಘವಾಗಿ ಯೋಚಿಸಿ ಈ ನಿರ್ಧಾರ ಕೈಗೊಂಡಿದ್ದೇನೆ. ನನ್ನ ಹಾಗೂ ಕುಮಾರಸ್ವಾಮಿ ನಡುವೆ ವೈಯಕ್ತಿಕ ಏನು ಇಲ್ಲ. ಈಗ ಯಾವುದೇ ಚರ್ಚೆ ಬೇಡ. ಕುಮಾರಸ್ವಾಮಿ ದೊಡ್ಡವರು. ಅವರು ಏಕೆ ಹಾಗೆ ಹೇಳಿದ್ರೋ ಗೊತ್ತಿಲ್ಲ. ನಾನು ಜೆಡಿಎಸ್​​ನಲ್ಲಿ ಯಾವುದೇ ಅಧಿಕಾರ ಅನುಭವಿಸಿಲ್ಲ. ನಾನು ಶಾಸಕನಾಗಿ ಸೋತವನು. ಇನ್ನು ಜೆಡಿಎಸ್​ನಲ್ಲಿ ಯಾವ ಅಧಿಕಾರ ಅನುಭವಿಸಲು ಸಾಧ್ಯ. ಇವತ್ತು ಮನಸಾರೆ ಕಾಂಗ್ರೆಸ್ ಹೋಗಿದ್ದೇನೆ. ಈ ಸಂದರ್ಭದಲ್ಲಿ ದೇಶಕ್ಕೆ ಕಾಂಗ್ರೆಸ್ ಅಗತ್ಯತೆ ಇದೆ ಎಂದು ತಿಳಿಸಿದರು.

ಪಕ್ಷ ನನ್ನ ಹೇಗೆ ಉಪಯೋಗಿಸಿಕೊಳ್ಳುತ್ತಾ ಹಾಗೇ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಶಿವಮೊಗ್ಗ ಚಲೋ ಕಾರ್ಯಕ್ರಮದಲ್ಲಿ ನಾನಿರಲ್ಲ. ಈ ಬಗ್ಗೆ ಪಕ್ಷದ ನಾಯಕರಿಗೆ ತಿಳಿಸಿದ್ದೇನೆ. ಕಾಂಗ್ರೆಸ್​ನಲ್ಲಿ ನನ್ನ ಸೊರಬಕ್ಕೆ ಸೀಮಿತ ಮಾಡ್ತಾರೋ, ಶಿವಮೊಗ್ಗ ಜಿಲ್ಲೆಗೆ ಬಳಸಿಕೊಳ್ತಾರೋ ಗೊತ್ತಿಲ್ಲ. ಪಕ್ಷ ನನ್ನ ಹೇಗೆ ಬಳಸಿಕೊಳ್ಳುತ್ತೆ ಹಾಗೆ ಕೆಲಸ ಮಾಡ್ತೇನೆ. ಚುನಾವಣೆ ಅನ್ನೋದು ಪರೀಕ್ಷೆ ತರಹ. ಪಾಸ್ ಫೇಲ್ ತರಹ. ಆದರೆ ನಾಯಕತ್ವ ಎಂದೂ ಸೋಲೋದಿಲ್ಲ. ನಾನು ಜೆಡಿಎಸ್​​ನಲ್ಲಿ ಯಾವತ್ತೂ ಅಧಿಕಾರ ಅನುಭವಿಸಿಲ್ಲ. ಕಾಂಗ್ರೆಸ್​​ನಲ್ಲಿ ಬೆಳೆಯಲು ಅವಕಾಶ ಇದೆ ಅದಕ್ಕೆ ಸೇರ್ಪಡೆ ಆಗುತ್ತಿದ್ದೇನೆ ಎಂದರು.

ABOUT THE AUTHOR

...view details