ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಬಿಬಿಎಂಪಿ ಸದಸ್ಯರು ನಗರದ ಜೆಡಬ್ಲ್ಯು ಮ್ಯಾರಿಯೆಟ್ ಹೋಟೆಲ್ನಲ್ಲಿ ಮೇಯರ್ ಆಯ್ಕೆ ಕುರಿತಂತೆ ಸಭೆ ನಡೆಸಲಾಗುತ್ತಿದೆ.
ಬಿಬಿಎಂಪಿ ಮೇಯರ್ ಚುನಾವಣೆ: ಬಿಜೆಪಿ ನಾಯಕರ ತೀರ್ಮಾನಕ್ಕೆ ಬದ್ಧ ಎಂದ ಸದಸ್ಯರು - ಬಿಬಿಎಂಪಿ ಮೇಯರ್ ಚುನಾವಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಕುರಿತಂತೆ ಬಿಜೆಪಿ ನಾಯಕರು ಬಿಬಿಎಂಪಿ ಬಿಜೆಪಿ ಸದಸ್ಯರೊಂದಿಗೆ ಸಭೆ ನಡೆಸಲಾಗುತ್ತಿದೆ. ನಾಯಕರ ಆಯ್ಕೆ ಬದ್ಧ ಎಂದ ಬಿಬಿಎಂಪಿ ಬಿಜೆಪಿ ಸದಸ್ಯರು.
ಪಕ್ಷ ಯಾರನ್ನು ಅಭ್ಯರ್ಥಿ ಎಂದು ಘೋಷಿಸುವುತ್ತದಯೋ, ಸದಸ್ಯರೆಲ್ಲ ಅವರನ್ನು ಬೆಂಬಲಿಸುತ್ತೇವೆ. ಈ ಬಾರಿ ಬಿಬಿಎಂಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ನಾವೇ ಎಂಬುದು ಖಚಿತ ಎಂದು ಬಿಜೆಪಿ ಕಾರ್ಪೊರೇಟರ್ ಪದ್ಮನಾಭ ರೆಡ್ಡಿ ತಿಳಿಸಿದರು.
ಇದೇ ವೇಳೆ, ಹೋಟೆಲ್ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಮೇಯರ್ ಅಭ್ಯರ್ಥಿ ಗೌತಮ್, ವರಿಷ್ಠರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ, ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಸಭೆಗೆ ಹಾಜರಾಗುವಂತೆ ಪಕ್ಷದ ನಾಯಕರು ಸೂಚಿಸಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ. ಪದ್ಮನಾಭರೆಡ್ಡಿ ಮೇಯರ್ ಅಭ್ಯರ್ಥಿ ಎಂದು ಪಕ್ಷ ತೀರ್ಮಾನಿಸಿದರೆ, ಅವರಿಗೆ ಸಂಪೂರ್ಣ ಬೆಂಬಲವಿದೆ.