ಕರ್ನಾಟಕ

karnataka

ETV Bharat / state

ಎಸ್​ಸಿ , ಎಸ್​ಟಿ ಮೀಸಲು - ಸಂಪುಟ ಉಪ ಸಮಿತಿ ರಚನೆಗೆ ತೀರ್ಮಾನ: ಸಚಿವ ಶ್ರೀರಾಮುಲು - Minister Sriramulu

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದ್ದು, ನಾಗಮೋಹನ್ ದಾಸ್ ಸಮಿತಿ ವರದಿ ಅನ್ವಯ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

Minister Sriramulu
ಶ್ರೀರಾಮುಲು

By

Published : Nov 18, 2020, 3:16 PM IST

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲು ಹೆಚ್ಚಿಸುವ ನಿಟ್ಟಿನಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು

ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ನಡೆದಿತ್ತು. ಪರಿಶಿಷ್ಟ ಜಾತಿಗೆ ಶೇ. 15ರಷ್ಟು ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ‌‌‌. 7ರಷ್ಟು ಮೀಸಲು ನಿಗದಿಪಡಿಸಲು ಒತ್ತಾಯವಿತ್ತು. ಮೀಸಲಾತಿ ಹೆಚ್ಚಳ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದ್ದು, ನಾಗಮೋಹನ್ ದಾಸ್ ಸಮಿತಿ ವರದಿ ಅನ್ವಯ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಐತಿಹಾಸಿಕ ಕ್ಷೇತ್ರವಾಗಿರುವ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಲು ಒಮ್ಮತದ ತೀರ್ಮಾನವಾಗಿದೆ ಎಂದರು.

ABOUT THE AUTHOR

...view details