ಕರ್ನಾಟಕ

karnataka

By

Published : Jun 9, 2021, 5:26 PM IST

ETV Bharat / state

ಆಮ್ಲಜನಕ ಪೂರೈಕೆಗೆ ಜಿಲ್ಲಾವಾರು ನೋಡಲ್‌ ಆಫೀಸರ್‌ ನೇಮಕಕ್ಕೆ ನಿರ್ಧಾರ : ಸಚಿವ ಜಗದೀಶ್‌ ಶೆಟ್ಟರ್

ಎನ್‌ಐಸಿ ಮೂಲಕ ಒಂದು ತಂತ್ರಾಂಶವನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಈ ತಂತ್ರಾಂಶದ ಮೂಲಕ ಆಸ್ಪತ್ರೆಗಳು ಆಮ್ಲಜನಕದ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಇನ್ನು, 3 ದಿನಗಳಲ್ಲಿ ಸಿದ್ದವಾಗಲಿದ್ದು, ಸದ್ಯದಲ್ಲೇ ಲೋಕಾರ್ಪಣೆ ಮಾಡಲಾಗುವುದು. ಕೇಂದ್ರ ಸರ್ಕಾರದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಅನುಮತಿ ನೀಡಿದೆ..

Decision to appoint District Nodal Officer for Oxygen Supply
ಸಚಿವ ಜಗದೀಶ್‌ ಶೆಟ್ಟರ್

ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇದಿನೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದೆ ಆಸ್ಪತ್ರೆಗಳಿಗೆ ಆದ್ಯತೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್‌ ಆಫೀಸರ್‌ ನೇಮಕ ಮಾಡಲು ನಿರ್ಧರಿಸಲಾಗಿದೆ.

ವಿಧಾನಸೌಧದಲ್ಲಿ ರಾಜ್ಯದ ಆಮ್ಲಜನಕ ಉತ್ಪಾದನೆ ಸರಬರಾಜು ಉಸ್ತುವಾರಿ ಹಾಗೂ ಬೃಹತ್‌ ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಸಭೆ ನಡೆಸಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಸಚಿವ ಜಗದೀಶ್‌ ಶೆಟ್ಟರ್‌, ರಾಜ್ಯ ಮತ್ತು ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನೇದಿನೆ ಕಡಿಮೆಯಾಗುತ್ತಿವೆ.

ಇದರಿಂದಾಗಿ ಆಮ್ಲಜನಕದ ಬೇಡಿಕೆಯೂ ಕಡಿಮೆ ಆಗುತ್ತಿದೆ. ಕಳೆದ ಎರಡು ದಿನಗಳನ್ನು ಗಮನಿಸಿದಲ್ಲಿ ಸಾರಾಸರಿಯಾಗಿ 580 ಎಂ.ಟಿಗಳಷ್ಟು ಮಾತ್ರ ಆಮ್ಲಜನಕದ ಬೇಡಿಕೆ ಇದೆ. ಆದರೆ, ಬೇಡಿಕೆ ಕಡಿಮೆ ಆಗಿರುವುದರಿಂದ ಹೆಚ್ಚಿನ ಗಮನ ನೀಡದೇ ಇರುವುದು ಸರಿಯಲ್ಲ. ಮುಂದಿನ ಮೂರನೇ ಅಲೆಗೆ ಪರಿಸ್ಥಿತಿ ತಿಳಿಯಾಗಿರುವ ಸಂದರ್ಭದಲ್ಲೇ ಅಗತ್ಯ ತಯಾರಿ ಮಾಕೊಳ್ಳಬೇಕು. ಈ ಹಿನ್ನೆಲೆ ಜಿಲ್ಲಾವಾರು ಆಸ್ಪತ್ರೆಗಳನ್ನು ಆಮ್ಲಜನಕ ಸ್ವಾವಲಂಬಿ ಮಾಡಬೇಕು. ಜಿಲ್ಲೆಗಳಲ್ಲಿ ಬಫರ್‌ ಸ್ಟಾಕ್‌ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

ಎನ್‌ಐಸಿ ಮೂಲಕ ಒಂದು ತಂತ್ರಾಂಶವನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಈ ತಂತ್ರಾಂಶದ ಮೂಲಕ ಆಸ್ಪತ್ರೆಗಳು ಆಮ್ಲಜನಕದ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಇನ್ನು, 3 ದಿನಗಳಲ್ಲಿ ಸಿದ್ದವಾಗಲಿದ್ದು, ಸದ್ಯದಲ್ಲೇ ಲೋಕಾರ್ಪಣೆ ಮಾಡಲಾಗುವುದು. ಕೇಂದ್ರ ಸರ್ಕಾರದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಅನುಮತಿ ನೀಡಿದೆ. ಒಂದು ಬಾರಿ ಈ ಪ್ರಕ್ರಿಯೆ ಪ್ರಾರಂಭವಾದ ನಂತರ ಗೊಂದಲಗಳು ಉಂಟಾಗಬಾರದು ಎನ್ನುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್‌ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ. ನೋಡಲ್‌ ಅಧಿಕಾರಿಗಳು ಆಸ್ಪತ್ರೆಗೆ ಆದ್ಯತೆಯ ಮೇರೆಗೆ ಆಮ್ಲಜನಕ ಪೂರೈಕೆ ಮಾಡುವ ನಿಟ್ಟಿನಲ್ಲಿ ಮೇಲುಸ್ತುವಾರಿ ವಹಿಸಿಲಿದ್ದಾರೆ ಎಂದು ಮಾಹಿತಿ ನೀಡಿದರು.

3ನೇ ಕೋವಿಡ್‌ ಅಲೆ ಬಂದರೆ ರಾಜ್ಯ ಆಮ್ಲಜನಕ ವಿಷಯದಲ್ಲಿ ಸಿದ್ದವಾಗಿರಬೇಕಾಗಿರುವುದು ಬಹಳ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಅಲ್ಲದೆ, ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ABOUT THE AUTHOR

...view details