ಕರ್ನಾಟಕ

karnataka

ETV Bharat / state

ಬಿಎಸ್​ವೈ ಏಕವ್ಯಕ್ತಿ ಸಂಪುಟ ಸಭೆ, ಪ್ರವಾಹ ಸಂತ್ರಸ್ಥರಿಗೆ 10,000 ಪರಿಹಾರ ನೀಡಲು ತೀರ್ಮಾನ - Decision to grant 10,000 compensation to flood victims

ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಂಪುಟ‌ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಬಿಎಸ್​ವೈ ಏಕವ್ಯಕ್ತಿ ಸಂಪುಟ ಸಭೆ

By

Published : Aug 14, 2019, 8:05 PM IST

ಬೆಂಗಳೂರು:ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಂಪುಟ‌ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಮೂರನೇ ಬಾರಿಗೆ ಏಕ ವ್ಯಕ್ತಿ ಸಂಪುಟ ಸಭೆ ನಡೆಸಿದ ಯಡಿಯೂರಪ್ಪ, ಪ್ರಮುಖವಾಗಿ ನೆರೆ ಸಂತ್ರಸ್ತರಿಗೆ ಎನ್​ಡಿಆರ್​ಎಫ್​ನ 6,200 ರೂ.ಗಳೊಂದಿಗೆ ರಾಜ್ಯ ಸರ್ಕಾರದ 3,800 ರೂ.ಗಳನ್ನು ಸೇರಿಸಿ ಒಟ್ಟು 10,000 ರೂ.ಗಳ ಪರಿಹಾರ ನೀಡಲು ತೀರ್ಮಾನ ಕೈಗೊಂಡರು. ಇದರ ಜೊತೆಗೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗವನ್ನು 956 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಯಿತು.ಶಿವಮೊಗ್ಗ ಕಿರು ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಕೆಎಸ್​ಐಐಡಿಸಿ ಸಂಸ್ಥೆಯ ಮೂಲಕ 38 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಯಿತು.ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ 66 ಸಂಖ್ಯೆಯ ಸಣ್ಣ ನೀರಾವರಿ/ ಜಿಲ್ಲಾ ಪಂಚಾಯತ್ ಕೆರೆಗಳನ್ನು ಮೂಡಿ ಗ್ರಾಮದ ಹತ್ತಿರ ವರದಾ ನದಿಯಿಂದ ನೀರನ್ನೆತ್ತಿ ತುಂಬಿಸುವ 285 ಕೋಟಿ ರೂ.ಗಳ ಮುಡಿ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಮೆ: ಸತಾರೆಂ ಎಂಟರ್​ಪ್ರೈಸಸ್​ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರಿಗೆ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಶದಲ್ಲಿರುವ ಕನ್ನಹಳ್ಳಿಯಲ್ಲಿರುವ ಘನತ್ಯಾಜ್ಯ ಘಟಕದಲ್ಲಿನ 20 ಎಕರೆ ಜಾಗವನ್ನು 30 ವರ್ಷಗಳ ಅವಧಿಗೆ ‘ಉಪಯೋಗಕ್ಕೆ ಮಾತ್ರ’ ಆಧಾರದ ಮೇಲೆ ನೀಡಲು ನಿರ್ಧರಿಸಲಾಯಿತು. ಸಂಪುಟ ಸಭೆಯಲ್ಲಿ ಶಿವಮೊಗ್ಗದ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ABOUT THE AUTHOR

...view details