ಕರ್ನಾಟಕ

karnataka

ETV Bharat / state

ವಿಧಾನಸೌಧದಲ್ಲೇ ಮಳೆಗಾಲದ ಅಧಿವೇಶನ ನಡೆಸಲು ತೀರ್ಮಾನ: ಸಚಿವ ಜೆ.ಸಿ. ಮಾಧುಸ್ವಾಮಿ - ಸಚಿವ ಜೆ.ಸಿ. ಮಾಧುಸ್ವಾಮಿ

ವಿಧಾನಸೌಧದಲ್ಲಿ ಅಧಿವೇಶನ ನಡೆಸುವ ಕುರಿತಂತೆ ಇಂದು ಸಭೆ ನಡೆಸಲಾಗಿದೆ. ಮಳೆಗಾಲದ ಅಧಿವೇಶನ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Decision to have a session in vidhanasowdha
ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿ

By

Published : Aug 24, 2020, 3:12 PM IST

ಬೆಂಗಳೂರು: ವಿಧಾನಸೌಧದಲ್ಲೇ ಮಳೆಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿಯೇ ಅಧಿವೇಶನ ನಡೆಸುವ ಕುರಿತಂತೆ ಇಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌ ಅವರು ವಿಧಾನಸಭೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ವಿಧಾನಸಭೆಯ ಸಭಾಂಗಣವನ್ನು ವೀಕ್ಷಿಸಿದರು.

ಬಳಿಕ ಮಾತನಾಡಿದ ಸಚಿವರು, ಸಭಾಧ್ಯಕ್ಷರು, ಮುಖ್ಯ ಕಾರ್ಯದರ್ಶಿಯವರು ಸದನವನ್ನು ವೀಕ್ಷಣೆ ಮಾಡಿದ್ದಾರೆ. ವಿಧಾನಸೌಧದಲ್ಲೇ ಸದನ ನಡೆಸಲು ಸ್ಪೀಕರ್ ತೀರ್ಮಾನ ಮಾಡಿದ್ದಾರೆ. ಸ್ಪೀಕರ್ ತೀರ್ಮಾನಕ್ಕೆ ನಾವು ಸಮ್ಮತಿ ನೀಡಿದ್ದೇವೆ ಎಂದರು.

ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಟಿ

ಎರಡು ಸೀಟುಗಳ ಮಧ್ಯೆ ಗಾಜಿನ ಪರದೆ ಹಾಕಲಾಗುತ್ತದೆ. ಈ ಬಾರಿ ಅಧಿವೇಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಇರಲಿದೆ. ಅಧಿವೇಶನ ಪ್ರವೇಶಕ್ಕೆ ಸಾರ್ವಜನಿಕರಿಗೆ ಪಾಸ್ ನೀಡಲ್ಲ. ಪತ್ರಕರ್ತರಿಗೂ ಎರಡು ಗ್ಯಾಲರಿ ಮಾಡಲು ತೀರ್ಮಾನಿಸಲಾಗಿದೆ. ಪ್ರತಿ ಸದಸ್ಯರಿಗೆ ಫೇಸ್ ಶೀಲ್ಡ್, ಮಾಸ್ಕ್ ಕೊಡುತ್ತೇವೆ. ಉನ್ನತ ಅಧಿಕಾರಿಗಳು, ಪ್ರಿನ್ಸಿಪಲ್ ಸೆಕ್ರೆಟರಿಯಂಥ ಅಧಿಕಾರಿಗಳಿಗೆ ಮಾತ್ರ ಪ್ರವೇಶ ಇರಲಿದೆ ಎಂದು ವಿವರಿಸಿದರು.

ಪ್ರತಿ ಇಲಾಖೆಗೆ ಒಬ್ಬ ಅಧಿಕಾರಿ ಮಾತ್ರ ಬರಬೇಕು. ಸಚಿವರ ಜೊತೆ ಅವರ ಪಿಎಗಳು ಮಾತ್ರ ಇರಬೇಕು. 70 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ ನೀಡೋ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ABOUT THE AUTHOR

...view details