ಕರ್ನಾಟಕ

karnataka

ETV Bharat / state

ಮುಂಗಾರು ಋತುವಿನಲ್ಲಿ ಭಾರೀ ಮಳೆ: ಅತಿವೃಷ್ಟಿ, ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ - karnataka flood news

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದೆ.

Declaration of flood prone taluks
ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ

By

Published : Sep 11, 2020, 1:41 AM IST

ಬೆಂಗಳೂರು: ಮುಂಗಾರು ಋತುವಿನ ಆಗಸ್ಟ್​ನಲ್ಲಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು 'ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು' ಎಂದು ರಾಜ್ಯ ಸರ್ಕಾರ ಘೋಷಿಸಿದೆ.

2020ರ ಮುಂಗಾರು ಋತುವಿನ ಆಗಸ್ಟ್​ನಲ್ಲಿ ರಾಜ್ಯದಲ್ಲಿ ಸುರಿದ ಮಾಹಾ ಮಳೆಗೆ ಹಾಗೂ ಮಹಾರಾಷ್ಟ್ರ, ರಾಜ್ಯದಲ್ಲಿ ಕೃಷಿ ಕಣಿವೆ ಜಲಾಶಯಗಳು ತುಂಬಿ ಹರಿದ ನೀರಿನಿಂದ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇದೇ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಸಹ ಪ್ರವಾಹ ಪರಿಮಿತಿ ಉಂಟಾಗಿರುವುದರಿಂದ ಅಪಾರ ಪ್ರಮಾಣದಲ್ಲಿ ಜೀವಹಾನಿ, ಮನೆ ಹಾನಿ, ಬೆಳೆ ಹಾನಿ ಹಾಗೂ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಹಾನಿಯಾಗಿವೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದೆ. ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನಾಧರಿಸಿ ಆಗಸ್ಟ್ ನಲ್ಲಿ ಅತಿವೃಷ್ಟಿ / ಪ್ರವಾಹ ಎದುರಿಸಿದ 23 ಜಿಲ್ಲೆಗಳ 130 ತಾಲೂಕುಗಳನ್ನು 'ಅತಿವೃಷ್ಟಿ/ಪುವಾಹ ಪೀಡಿತ ತಾಲೂಕುಗಳು' ಎಂದು ಸರ್ಕಾರ ಘೋಷಿಸಿದೆ.

ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದ ತಾಲೂಕುಗಳಲ್ಲಿ ಎಸ್ ಡಿಆರ್ ಎಫ್ / ಎನ್ ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ಸರ್ಕಾರದ ಆದೇಶ , ಸುತೋಲೆಗಳಲ್ಲಿನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರ ಆದೇಶಿಸಿದೆ.

ABOUT THE AUTHOR

...view details