ಕರ್ನಾಟಕ

karnataka

ETV Bharat / state

ಬೆಳಗಾವಿ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರಿಂದ ಆಶ್ವಾಸನೆ: ಸಿಎಂ

ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಅವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಸ್ತಾಪಗಳ ಕುರಿತು ಮಾತುಕತೆ ನಡೆಸಿದರು.

defence-minister-has-assured-to-transfer-700-acres-of-land-in-belagavi-cm-bommai
ಬೆಳಗಾವಿ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರಿಂದ ಆಶ್ವಾಸನೆ: ಸಿಎಂ

By

Published : May 11, 2022, 11:02 PM IST

ನವದೆಹಲಿ/ಬೆಂಗಳೂರು:ಬೆಳಗಾವಿಯಲ್ಲಿ ರಾಜ್ಯ ಸರ್ಕಾರಕ್ಕೆ ಸೇರಿದ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದ್ದು, ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಇದಕ್ಕೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ.

ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಅವರನ್ನು ಭೇಟಿ ಮಾಡಿದ ಸಿಎಂ, ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಸ್ತಾಪಗಳ ಕುರಿತು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗಿದೆ. ಅದಕ್ಕಾಗಿ ಈ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಂಗ್ ಅವರು, ಸಂಬಂಧಪಟ್ಟವರ ಜೊತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಬಗ್ಗೆ ಅವಧಿ ವಿಸ್ತರಣೆಗೆ ಕೋರಲಾಗಿದ್ದ ಹಿನ್ನೆಲೆಯಲ್ಲಿ ವಿಸ್ತರಣೆ ನೀಡಿದ್ದಾರೆ. ಶಾಲೆಯ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವರನ್ನು ಆಹ್ವಾನಿಸಲಾಯಿತು ಎಂದರು.

ಇದನ್ನೂ ಓದಿ:ದೇಶದ ಜನರೇ ಕಾಂಗ್ರೆಸ್ ಪಕ್ಷವನ್ನು​ ಟಾರ್ಗೆಟ್ ಮಾಡಿದ್ದಾರೆ: ಸಿ.ಟಿ. ರವಿ ಟಾಂಗ್​

For All Latest Updates

TAGGED:

ABOUT THE AUTHOR

...view details