ಬೆಂಗಳೂರು:ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಪುನಾರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ರು.
ಇಂದು ಟೋಕಿಯೋ ಒಲಿಂಪಿಕ್-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡು ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕ್ರೀಡಾಪಟುಗಳಿಗೆ ಡಿಸಿಎಂ ಶುಭ ಕೋರಿದರು. ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುತ್ತಿದೆ. ಜೊತೆಗೆ ಬೋಧಕರು, ಬೋಧಕೇತರ ಸಿಬ್ಬಂದಿಗೂ ವ್ಯಾಕ್ಸಿನ್ ನೀಡಲಾಗುತ್ತಿದ ಎಂದು ಹೇಳಿದ್ರು.