ಕರ್ನಾಟಕ

karnataka

ETV Bharat / state

ಹುಳಿಮಾವು ಕೆರೆ ದುರಂತ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ದೊರೆಸ್ವಾಮಿ ಆಗ್ರಹ

ಎರಡು ವರ್ಷಗಳ ಹಿಂದೆ ಬೆಂಗಳೂರಿನ ಎಲ್ಲಾ ಕೆರೆಗಳ ವಿಚಾರವಾಗಿ ಒತ್ತುವರಿ ತೆರವು ಮಾಡಲು ಆಗ್ರಹಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಸಲ್ಲಿಸಿದ ದೂರಿನನ್ವಯ ನಿನ್ನೆ ನ್ಯಾಯಾಲಯದ ವಿಚಾರಣೆಗೆ ಅವರು ಹಾಜರಾಗಿದ್ದರು.

By

Published : Dec 11, 2019, 7:55 AM IST

bangalore
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಬೆಂಗಳೂರು: ಹುಳಿಮಾವು ಕೆರೆ ಕಟ್ಟೆ ಒಡೆದು ನಡೆದ ದುರಂತಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ನ್ಯಾಯಾಲಯ ಡಿಸೆಂಬರ್ 10ರಂದು ಸಂಬಂಧಪಟ್ಟ ದಾಖಲೆಗಳನ್ನು ನೀಡಲು ಬಿಬಿಎಂಪಿಗೆ ಸೂಚಿಸಿತ್ತು.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನ್ಯಾಯಾಲಯಕ್ಕೆ ಹಾಜರು

ಎರಡು ವರ್ಷಗಳ ಹಿಂದೆ ಬೆಂಗಳೂರಿನ ಎಲ್ಲಾ ಕೆರೆಗಳ ವಿಚಾರವಾಗಿ ಒತ್ತುವರಿ ತೆರವು ಮಾಡಲು ಆಗ್ರಹಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಸಲ್ಲಿಸಿದ ದೂರಿನನ್ವಯ ನಿನ್ನೆ ನ್ಯಾಯಾಲಯದ ವಿಚಾರಣೆಗೆ ಅವರು ಹಾಜರಾಗಿದ್ದರು.

ಈ ವೇಳೆ ಹುಳಿಮಾವು ಕೆರೆ ವಿಚಾರವಾಗಿ ಮಾತನಾಡಿದ ಅವರು, ಹುಳಿಮಾವು ಕೆರೆಯ ಸುತ್ತಮುತ್ತ ಬಿಡಿಎ ಕೆರೆಯ ಜಾಗವನ್ನು ಒತ್ತುವರಿ ಮಾಡಿದ್ದು ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ. ಬಿಡಿಎ ಲೇಔಟ್ ನಿರ್ಮಾಣ ಮಾಡಲು 16 ಎಕರೆ ರಸ್ತೆ ನಿರ್ಮಾಣಕ್ಕಾಗಿ 6 ಎಕರೆ ಭೂಮಿ ಒತ್ತುವರಿ ಮಾಡಿಕೊಂಡಿದೆ ಎಂದರು.

ಈ ಕೆರೆ ನಿರ್ವಹಣೆಯ ವಿಚಾರವಾಗಿಯೂ ಅನೇಕ ಗೊಂದಲಗಳಿದ್ದು, ಸುಮಾರು ಎರಡು ವರ್ಷಗಳಿಂದ ಯಲಹಂಕ, ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಭಾರಿ ಗೊಂದಲ ಸೃಷ್ಟಿಯಾಗಿತ್ತು ಎಂದರು.

ಆದರೆ ಸದ್ಯ ಬೆಂಗಳೂರು ದಕ್ಷಿಣ ವಲಯದ ಅಧಿಕಾರಿಗಳು ಒತ್ತುವರಿಯಾಗಿರುವ ಜಾಗವನ್ನು ತೆರವು ಮಾಡುವ ಬಗ್ಗೆ ಕೋರ್ಟ್ ಮುಂದೆ ಒಪ್ಪಿಕೊಂಡಿದ್ದಾರೆ. ಕೆರೆ ಕಟ್ಟೆ ಒಡೆದ ವಿಚಾರವಾಗಿ ಈಗಾಗಲೇ ಜೆಸಿಬಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮತ್ತು ಇನ್ನಿತರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆದಷ್ಟು ಬೇಗ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಇದರಿಂದ ತೊಂದರೆಗೊಳಗಾದ ಜನರಿಗೆ ಪರಿಹಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ABOUT THE AUTHOR

...view details