ಕರ್ನಾಟಕ

karnataka

ETV Bharat / state

ಕೆಪಿಎಸ್​ಸಿ ನೇಮಕಾತಿಯಲ್ಲಿ ವಿಳಂಬ : ಮಾಜಿ ಸಚಿವ ಸುರೇಶ್‌ ಕುಮಾರ್‌ ವಿನೂತನ ಪ್ರತಿಭಟನೆ - ಕೆಪಿಎಸ್​ಸಿ ಸಂಸ್ಥೆಯ ಬಾಗಿಲು ತಟ್ಟಿ ಮಾಹಿತಿ ಕೇಳುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ

ಕೆಪಿಎಸ್​ಸಿ ಕಚೇರಿಯ ಬಾಗಿಲು ತಟ್ಟುವ ಮೂಲಕ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ವಿಭಿನ್ನ ಪ್ರತಿಭಟನೆ ನಡೆಸಿದರು. 2021ರ ಫೆಬ್ರವರಿಯಲ್ಲಿ ನಡೆದ ಕೆಎಎಸ್ ಮುಖ್ಯ ಪರೀಕ್ಷೆಗಳ‌ ಫಲಿತಾಂಶ ಒಂದೂವರೆ ವರ್ಷದ ಬಳಿಕವೂ ಪ್ರಕಟವಾಗಿಲ್ಲ.‌ ಅದೇ ರೀತಿ ಹತ್ತಾರು ಇಲಾಖೆಗಳಿಗೆ ಸಿಬ್ಬಂದಿ ನೇಮಕಾತಿಗೆ ಸಂಸ್ಥೆ ಅನುಸರಿಸುತ್ತಿರುವ ವಿಳಂಬ ಧೋರಣೆಯಿಂದ ಇಡೀ ಆಡಳಿತ ವ್ಯವಸ್ಥೆ ನಲುಗುತ್ತಿದೆ ಎಂದು ಕಿಡಿಕಾರಿದರು..

Former minister Suresh Kumar protests in Bengaluru
ವಿನೂತನವಾಗಿ ಪ್ರತಿಭಟಿಸಿದ ಮಾಜಿ ಸಚಿವ ಸುರೇಶ್ ಕುಮಾರ್

By

Published : May 31, 2022, 3:10 PM IST

ಬೆಂಗಳೂರು :ಆಡಳಿತ ಯಂತ್ರದ‌ ಸಮರ್ಪಕ‌ ನಿರ್ವಹಣೆಗೆ ದಕ್ಷ, ಸಮರ್ಥ ಮಾನವ ಸಂಪನ್ಮೂಲವನ್ನು ನಿರಂತರ ಪೂರೈಕೆ ಮಾಡಬೇಕಿರುವುದು ಕೆಪಿಎಸ್​ಸಿ ಸಂಸ್ಥೆ. ಆದರೆ, ಇದರ ನಿಷ್ಕ್ರಿಯ ಆಡಳಿತದಿಂದ ಸರ್ಕಾರಿ ವ್ಯವಸ್ಥೆಯ ಮೇಲೆ ಪ್ರತಿಕೂಲ‌ ಪರಿಣಾಮ ಬೀರುತ್ತಿದೆ. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್, ಕೆಪಿಎಸ್​ಸಿ ಸಂಸ್ಥೆಯ ಬಾಗಿಲು ತಟ್ಟಿ ಮಾಹಿತಿ ಕೇಳುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದರು.

ಮಂಗಳವಾರ ಕೆಪಿಎಸ್​ಸಿ ಕಚೇರಿಯ ಬಾಗಿಲುತಟ್ಟುವ ಮೂಲಕ ಪ್ರತಿಭಟಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2021ರ ಫೆಬ್ರವರಿಯಲ್ಲಿ ನಡೆದ ಕೆಎಎಸ್ ಮುಖ್ಯ ಪರೀಕ್ಷೆಗಳ‌ ಫಲಿತಾಂಶ ಒಂದೂವರೆ ವರ್ಷದ ಬಳಿಕವೂ ಪ್ರಕಟವಾಗಿಲ್ಲ.‌ ಅದೇ ರೀತಿ ಹತ್ತಾರು ಇಲಾಖೆಗಳಿಗೆ ಸಿಬ್ಬಂದಿ ನೇಮಕಾತಿಗೆ ಸಂಸ್ಥೆ ಅನುಸರಿಸುತ್ತಿರುವ ವಿಳಂಬ ಧೋರಣೆಯಿಂದ ಇಡೀ ಆಡಳಿತ ವ್ಯವಸ್ಥೆ ನಲುಗುತ್ತಿದೆ ಎಂದು ಕಿಡಿಕಾರಿದರು.

ಕೆಪಿಎಸ್‌ಸಿ ವಿರುದ್ಧ ವಿನೂತನವಾಗಿ ಪ್ರತಿಭಟಿಸಿದ ಮಾಜಿ ಸಚಿವ ಸುರೇಶ್ ಕುಮಾರ್

ತಾವು ಸಚಿವರಾಗಿದ್ದ ಸಂದರ್ಭದಲ್ಲಿಯೂ ಹಲವು ಉದ್ಯೋಗಾಂಕ್ಷಿಗಳಿಗೆ ನ್ಯಾಯ ದೊರಕಿಸಲು ಪ್ರಯತ್ನಿಸಿದ್ದು, ಸಂಸ್ಥೆಯ ಸ್ವಾಯತ್ತತೆಯೇ ಅದರ ಜವಾಬ್ದಾರಿ‌ ನಿರ್ವಹಣೆಗೆ ಪ್ರತಿಕೂಲವಾಗಿರುವುದು ದುರಾದೃಷ್ಟಕರ‌. ಯುಪಿಎಸ್​ಸಿ ಮಾದರಿಯಲ್ಲಿ ಸಂಸ್ಥೆ ವೃತ್ತಿಪರವಾಗಿ ಕಾರ್ಯ‌ ನಿರ್ವಹಿಸಲು ಏಕೆ ಸಾಧ್ಯವಿಲ್ಲ?.

ಕೆಪಿಎಸ್​ಸಿ ಕಳೆದ ಹಲವು ವರ್ಷಗಳಲ್ಲಿ ನಡೆಸಿರುವ ಪರೀಕ್ಷೆಗಳೆಷ್ಟು? ಎಷ್ಟು ಫಲಿತಾಂಶ ನೀಡಲಾಗಿದೆ? ಎಷ್ಟು ಯುವಕರಿಗೆ ಉದ್ಯೋಗ ದೊರಕಿಸಲಾಗಿದೆ? ವಿಳಂಬ ಧೋರಣೆಗೆ ಕಾರಣ ಏನು? ದಕ್ಷ, ಪ್ರಾಮಾಣಿಕ‌ ಅಧಿಕಾರಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಸಂಸ್ಥೆಯ ಕ್ರಿಯಾಯೋಜನೆ ಏನು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಬಸವಣ್ಣ ಕುರಿತ ತಿರುಚಿದ ಪಠ್ಯ ಸರಿಪಡಿಸದಿದ್ದರೆ ಹೋರಾಟ: ಶಿವಾಚಾರ್ಯ ಶ್ರೀ

ಪ್ರಮುಖವಾಗಿ ಆಡಳಿತ ಮತ್ತು ಆಯೋಗದ ನಡುವೆ ಸಮನ್ವಯತೆ ಇಲ್ಲದಿರುವುದು ಕಂಡು ಬಂದಿದೆ. ಈ ವಿಚಾರದ ಬಗ್ಗೆ ಮುಂದಿನ ವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸುವುದಾಗಿ ಸುರೇಶ್ ಕುಮಾರ್ ಹೇಳಿದರು. ಸದ್ಯ ನಾಳೆಯ ಒಳಗಾಗಿ ವಿವಿಧ ನೇಮಕ ಪ್ರಕ್ರಿಯೆಗಳ ಸ್ಟೇಟಸ್ ಅನ್ನು ವೆಬ್‌ಸೈಟ್​ನಲ್ಲಿ ಪ್ರಕಟ ಮಾಡುತ್ತಾರೆ ಎಂದು ತಿಳಿಸಿದರು.

ಇನ್ನೂ ಕೆಪಿಎಸ್‌ಸಿ 106 ಕೆಎಎಸ್ ಹುದ್ದೆಗಳಿಗೆ ಮುಖ್ಯ ಪರೀಕ್ಷೆಯನ್ನು ಫೆಬ್ರುವರಿ-2021ರಂದು ನಡೆಸಿದೆ. ಅದರ ಫಲಿತಾಂಶ ಜೂನ್ ತಿಂಗಳ ಕೊನೆ ಒಳಗೆ ನೀಡುವುದಾಗಿ ಹೇಳಿದ್ದಾರೆ ಎಂದು ಸಚಿವರು ಹೇಳಿದರು.

ABOUT THE AUTHOR

...view details