ಬೆಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತು ದಿನದಲ್ಲಿ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.
ರಸ್ತೆ ಗುಂಡಿ ಮುಚ್ಚಲು ವಿಳಂಬ: ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ - undefined
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ವಿಳಂಬವಾದ ಹಿನ್ನೆಲೆ ಈ ಕುರಿತು ವರದಿ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.
ಹೈಕೋರ್ಟ್
ಈ ಕುರಿತು ಕೋರಮಂಗಲದ ವಿಜಯನ್ ಮೆನನ್ ಸೇರಿ ನಾಲ್ವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರವಾಗಿ ವಾದಿಸಿದ ವಕೀಲರು ನಗರದ ರಸ್ತೆಯಲ್ಲಿರುವ ಗುಂಡಿಗಳನ್ನ ಇನ್ನು ಮುಚ್ಚಿಲ್ಲ.
ಕೆಲವೊಂದು ಗುಂಡಿಗಳನ್ನ ಮುಚ್ಚಿದ್ರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ವಾದಿಸಿದ್ರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಿಬಿಎಂಪಿಗೆ ರಸ್ತೆ ಗುಂಡಿಗಳ ಸ್ಥಿತಿಗತಿ ಕುರಿತು ವರದಿ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿದೆ.