ಕರ್ನಾಟಕ

karnataka

ETV Bharat / state

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಒಂದೆರಡು ದಿನದಲ್ಲಿ ಸಿಹಿಸುದ್ದಿ: ಸಚಿವ ಅಶ್ವತ್ಥನಾರಾಯಣ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಮತ್ತು ಸಮಸ್ಯೆಗಳ ಕುರಿತು ಚರ್ಚಿಸಲು ಮಂಗಳವಾರ ಸಭೆ ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​ ನಾರಾಯಣ ಅವರು, ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಮನವಿ ಮಾಡಿದರು.

Minister Ashwaththanarayana
ಸಚಿವ ಅಶ್ವತ್ಥನಾರಾಯಣ ಸಭೆ

By

Published : Jan 11, 2022, 9:14 PM IST

ಬೆಂಗಳೂರು: ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್​ನಾರಾಯಣ ಹೇಳಿದ್ದಾರೆ.

ಸಚಿವ ಅಶ್ವತ್ಥನಾರಾಯಣ ಸಭೆ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಮತ್ತು ಸಮಸ್ಯೆಗಳ ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಮಂಗಳವಾರ ಮೂರು ತಾಸುಗಳ ಕಾಲ ಸಭೆ ನಡೆಯಿತು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು. ಈ ವೇಳೆ ಉಪಸ್ಥಿತರಿದ್ದ ವಿಧಾನಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯವನ್ನು ಕುರಿತು ಚರ್ಚಿಸಲಾಯಿತು. ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು.

ಸಚಿವ ಅಶ್ವತ್ಥನಾರಾಯಣ ಸಭೆ

ಇದನ್ನೂ ಓದಿ:ಮಿಂಚಿನ ಓಟ ನಿಲ್ಲಿಸಿದ 'ಹಾವೇರಿ ಡಾನ್'​: ಸೋಲಿಲ್ಲದ ಸರದಾರನ ಸಾವು, ಅಭಿಮಾನಿಗಳಲ್ಲಿ ಮಡುಗಟ್ಟಿತು ಶೋಕ..

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವತ್ಥ್​ನಾರಾಯಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದು ಅಭಯ ನೀಡಿದರು.

ABOUT THE AUTHOR

...view details