ಬೆಂಗಳೂರು: ಬ್ರಿಟನ್ ರಾಣಿ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಒಂದು ದಿನದ ಶೋಕಾಚರಣೆ ನಡೆಯಲಿದೆ. ರಾಣಿಯ ಗೌರವಾರ್ಥವಾಗಿ ಭಾನುವಾರ ದೇಶದಾದ್ಯಂತ ಶೋಕಾಚರಣೆ ಆಚರಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಶೋಕಾಚರಣೆ ಮಾಡಲಾಗುತ್ತದೆ.
ಬ್ರಿಟನ್ ರಾಣಿ ಎಲಿಜಬೆತ್ ನಿಧನ: ರಾಜ್ಯದಲ್ಲಿ ನಾಳೆ ಒಂದು ದಿನದ ಶೋಕಾಚರಣೆ - ಎಲಿಜಬೆತ್ ನಿಧನ ಹಿನ್ನೆಲೆಯಲ್ಲಿ ಶೋಕಾಚರಣೆ
ಶೋಕಾಚರಣೆ ಹಿನ್ನೆಲೆಯಲ್ಲಿ ನಾಳೆ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.
ಬ್ರಿಟನ್ ರಾಣಿ ಎಲಿಜಬೆತ್ ನಿಧನ: ರಾಜ್ಯದಲ್ಲಿ ನಾಳೆ ಒಂದು ದಿನದ ಶೋಕಾಚರಣೆ
ನಾಳೆ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕಿಂಗ್ ಚಾರ್ಲ್ಸ್ III ಬ್ರಿಟನ್ನ ರಾಜ ಎಂದು ಅಧಿಕೃತ ಘೋಷಣೆ