ಬೆಂಗಳೂರು: ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಜನಪ್ರತಿನಿಧಿಗಳ ಕೋರ್ಟ್ ನೋಟಿಸ್ ಜಾರಿ ಮಾಡಿದದ್ದು, ಅಕ್ಟೋಬರ್ 4ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
ಡಿನೋಟಿಫಿಕೇಶನ್ ಪ್ರಕರಣ: ಖುದ್ದು ಹಾಜರಾಗಲು ಕುಮಾರಸ್ವಾಮಿಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ
2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜುಲೈ 20ರಂದು ದೂರು ನೀಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ ರಿಪೋರ್ಟ್ ವಜಾಗೊಳಿಸಿ, ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿತ್ತು. ಸದ್ಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ಹೆಚ್ಡಿಕೆಗೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜುಲೈ 20ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ ರಿಪೋರ್ಟ್ ವಜಾಗೊಳಿಸಿ, ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿತ್ತು.
ಪ್ರಕರಣದ ಹಿನ್ನೆಲೆ:2006ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವರಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೊಟೀಫಿಕೇಷನ್ ಮಾಡಿದ್ದರು ಎಂಬ ಆರೋಪ ಪ್ರಕರಣ ಇದಾಗಿದೆ. ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. 2012ರಲ್ಲಿ ಈ ಬಗ್ಗೆ ಲೋಕಾಯುಕ್ತ ಪ್ರಕರಣ ದಾಖಲಿಸಿ, 2018 ರಲ್ಲಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಮಹಾದೇವಸ್ವಾಮಿ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಅಕ್ಟೋಬರ್ 4ರಂದು ಖುದ್ದು ಹಾಜರಾಗಲು ಕುಮಾರಸ್ವಾಮಿಗೆ ಸೂಚನೆ ನೀಡಿದೆ.