ಕರ್ನಾಟಕ

karnataka

By

Published : Oct 1, 2019, 5:00 PM IST

ETV Bharat / state

ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ.. ಕೋರ್ಟ್‌ನಿಂದ ಹೆಚ್​ಡಿಕೆಗೆ 4 ವಾರ ತಾತ್ಕಾಲಿಕ ರಿಲೀಫ್​!

ಹಲಗೇವಡೇರಹಳ್ಳಿಯಲ್ಲಿ ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ.

ಡಿನೋಟಿಫಿಕೇಷನ್ ಪ್ರಕರಣ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಹಲಗೇವಡೇರಹಳ್ಳಿಯಲ್ಲಿನ ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಮಾಜಿ ಸಿಎಂ ಹೆಚ್‌ಡಿಕೆ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಡಿನೋಟಿಫಿಕೇಷನ್ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆ ನಡೆಸುವ ಸಂಬಂಧ ಅಕ್ಟೋಬರ್ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಕುಮಾರಸ್ವಾಮಿಗೆ ಸಮನ್ಸ್ ನೀಡಿತ್ತು. ಇದನ್ನ ಪ್ರಶ್ನಿಸಿ ಹೈಕೊರ್ಟ್​ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಕುಮಾರಸ್ವಾಮಿಗೆ ಡಿನೋಟಿಫಿಕೇಷನ್ ವಿಚಾರಣೆ ಎದುರಿಸುವುದಕ್ಕೆ ನಾಲ್ಕು ವಾರಗಳ ತಾತ್ಕಾಲಿಕ ರಿಲೀಫ್ ನೀಡಿದೆ. ಹಾಗೆಯೇ ಪ್ರತಿವಾದಿಗಳಿಗೆ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.

ಕುಮಾರಸ್ವಾಮಿಯವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್​ನ ಜನಪ್ರತಿನಿಧಿ ನ್ಯಾಯಾಲಯವು ರದ್ದುಪಡಿಸಿ ವಿಚಾರಣೆಗೆ ಮುಂದಾಗಿತ್ತು. ಅಕ್ಟೋಬರ್ 4ರಂದು ಕುಮಾರಸ್ವಾಮಿಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿತ್ತು. ಅದರ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿ ವಿಚಾರಣೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details