ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ನಡೆಸುವ ಕುರಿತು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿದ್ದ ಸುತ್ತೋಲೆಯನ್ನು ಅಧಿಕಾರಿಗಳ ಗಮನಕ್ಕೆ ಬಾರದೆ ಇಲಾಖೆ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು.
ಹೌದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಗಳ ಗಮನಕ್ಕೆ ತಾರದೇ, ವೆಬ್ ಸೈಟ್ನಲ್ಲಿ ನವೆಂಬರ್ 26 ರಂದು 'ಸಂವಿಧಾನ ದಿನಾಚರಣೆ’ ಕುರಿತು ಅಕ್ಟೋಬರ್ 10ರಂದು ಸುತ್ತೋಲೆ ಹೊರಡಿಸಲಾಗಿತ್ತು. ಆ ಸುತ್ತೋಲೆ ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚಿಸಿದ್ದ ಕುರಿತು ಸಾಕಷ್ಟು ಗೊಂದಲಕಾರಿ ವಿಷಯಗನ್ನು ಒಳಗೊಂಡಿತ್ತು. ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ, ಬೇರೆ ಬೇರೆ ಸಮಿತಿಗಳು ಬರೆದಿದ್ದ ಕಾನೂನುಗಳನ್ನು ಒಟ್ಟುಗೂಡಿಸಿ ಅಂಬೇಡ್ಕರ್ ಕರಡು ತಯಾರಿಸಿದ್ದರು ಎಂದು ಉಲ್ಲೇಖಿಸಲಾಗಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.