ಬೆಂಗಳೂರು:ಐಟಿ-ಬಿಟಿ ಭಾಗದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ಐಟಿ ಕಂಪನಿಗಳಿಗೆ, ಐಟಿ ಉದ್ಯೋಗಿಗಳಿಗೆ ಆರೋಗ್ಯ ಇಲಾಖೆಯಿಂದ ಸಲಹೆ ಸೂಚನೆ ನೀಡಲಾಗಿದೆ. ಕೊರೊನಾ ಹಬ್ಬಿರುವ ಚೀನಾ, ಇರಾನ್, ಕೊರಿಯಾ, ಇಟಲಿ, ಇರಾನ್ಗೆ ಪ್ರಯಾಣ ಬೆಳೆಸಬೇಕಾದರೆ ಆರೋಗ್ಯ ಇಲಾಖೆಯ ಅನುಮತಿ ಕಡ್ಡಾಯ ಎಂದು ಆದೇಶಿಸಲಾಗಿದೆ.
ಬೇರೆ ಬೇರೆ ದೇಶಗಳಿಂದ ಭಾರತಕ್ಕೆ ಆಗಮಿಸಿದ್ದರೆ ವೈದ್ಯಕೀಯ ಪರೀಕ್ಷೆಗೆ ಒಳಗಾಗುವಂತೆ, ಯಾವುದೇ ಅಂತಾರಾಷ್ಟ್ರೀಯ ವಿಮಾನದಲ್ಲಿ ಪ್ರಯಾಣ ಮಾಡಿದರೆ ಮಾಹಿತಿ ಒದಗಿಸಬೇಕು. ಸೆಲ್ಫ್ ಡಿಕ್ಲರೇಷನ್ ಫಾರಂನಲ್ಲಿ ಆರೋಗ್ಯಾಧಿಕಾರಿಗಳಿಗೆ, ಇಮಿಗ್ರೇಷನ್ ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು. ಇನ್ನು ಯಾರಿಗಾದರೂ ಜ್ವರದ ಲಕ್ಷಣಗಳಿದ್ದಲ್ಲಿ ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆ ಮಾಡಿಕೊಳ್ಳುವಂತೆ. ಕೆಲಸ ಮಾಡುವ ಪ್ರದೇಶಗಳಲ್ಲಿ ಆಗಾಗ ಕೈ ತೊಳೆದುಕೊಳ್ಳುತ್ತಿರಿ ಎಂದು ಸಲಹೆ ನೀಡಲಾಗಿದೆ.