ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ: ಕಾಲೇಜು ಆರಂಭ ಕುರಿತು ಸಿಎಂ ಸಮಾಲೋಚನೆ - ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಪ್ರಸ್ತುತ ಸನ್ನಿವೇಶದಲ್ಲಿ ಕಾಲೇಜು ತೆರೆದರೆ ಎದುರಾಗಬಹುದಾದ ಸವಾಲುಗಳು, ಸಮಸ್ಯೆಗಳು ಮತ್ತು ವಿದ್ಯಾರ್ಥಿಗಳು-ಉಪನ್ಯಾಸಕರನ್ನು ಕೊರೊನಾ ಸೋಂಕಿನಿಂದ ರಕ್ಷಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ....ಕಾಲೇಜು ಆರಂಭ ಕುರಿತು ಸಿಎಂ ಸಮಾಲೋಚನೆ...!
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಲಾಕ್ಡೌನ್ನಿಂದ ಕಾಲೇಜುಗಳು, ಯೂನಿವರ್ಸಿಟಿಗಳು ಬಂದ್ ಆದ ನಂತರ ಆಗಿರುವ ಬೆಳವಣಿಗೆ, ಕಾಲೇಜು ಆರಂಭ ಮತ್ತು ಪರೀಕ್ಷೆ ನಡೆಸುವ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಪ್ರಸ್ತುತ ಸನ್ನಿವೇಶದಲ್ಲಿ ಕಾಲೇಜು ತೆರೆದರೆ ಎದುರಾಗಬಹುದಾದ ಸವಾಲುಗಳು, ಸಮಸ್ಯೆಗಳು ಮತ್ತು ವಿದ್ಯಾರ್ಥಿಗಳು-ಉಪನ್ಯಾಸಕರನ್ನು ಕೊರೊನಾ ಸೋಂಕಿನಿಂದ ರಕ್ಷಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಯಿತು.